ಸಕಲೇಶಪುರ : ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದ ಮಾದರಿಯಲ್ಲೇ ಜೆಡಿಎಸ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕರೆ ನೀಡಿದೆ ಎಂದು ಶಾಸಕ ಎಚ್ ಕೆ ಕುಮಾರಸ್ವಾಮಿ ಹೇಳಿದರು.
ನಂತರ ಮಾತನಾಡಿ ಕನ್ನಡದ ಕಂಪು ಎಲ್ಲೆಡೆ ಪಸರಿಸಬೇಕು, ಪ್ರತಿಯೊಬ್ಬರೂ ಕನ್ನಡ ಬಾವುಟವನ್ನು ತಮ್ಮ ಮನೆಯ ಮೇಲೆ ಹಾರಿಸುವುದರ ಜೊತೆ ಕನ್ನಡವನ್ನು ಬೆಳೆಸಿ ಉಳಿಸಬೇಕು. ನಮ್ಮ ನಾಡಿನಲ್ಲಿ ಕನ್ನಡಕ್ಕೆ ಅದರದ್ದೇ ಅಗ್ರ ಸ್ಥಾನವಿದೆ ಕೇವಲ ಆಚರಣೆಗೆ ಸೀಮಿತಗೊಳಿಸದೇ ಪ್ರತಿಕ್ಷಣ ಕನ್ನಡದ ಏಳೆಗಾಗಿ ಪ್ರತಿಯೊಬ್ಬರೂ ಪಕ್ಷಾತೀತವಾಗಿ ಶ್ರಮಿಸಬೇಕು. ಕನ್ನಡವನ್ನು ಪ್ರತಿಯೊಬ್ಬರ ಮನದಲ್ಲಿ ಮುಖಂಡರಾದ ಕುಮಾರಸ್ವಾಮಿ ಅವರು ಈ ಅಭಿಯಾನವನ್ನು ಪ್ರಾರಂಬಿಸಿದ್ದಾರೆ ಎಂದರು.
ಕನ್ನಡಕ್ಕೆ ಅದರದ್ದೇ ಆದ ಇತಿಹಾಸವಿದೆ ಕೇವಲ ಆಚರಣೆಗೆ ಸೀಮಿತಗೊಳಿಸದೇ ಪ್ರತಿದಿನ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕು, ಕರ್ನಾಟಕದ ಜನತೆಗೆ ಇದು ಹೆಮ್ಮೆಯ ದಿನವಾಗಿದೆ, ಕನ್ನಡ ನಾಡು ಎಂಬುದೇ ಒಂದು ಧೀಮಂತ ಶಕ್ತಿಯಾಗಿದೆ ಇಂತಹ ನಾಡಿನಲ್ಲಿ ಜನ್ಮಪಡೆದ ನಾವು ಭಾಗ್ಯವಂತರು ಈ ಬಾರಿಯ 67ನೇ ಕನ್ನಡ ರಾಜ್ಯೋತ್ಸವವನ್ನು ಈ ಅತ್ಯಂತ ವಿಜೃಂಭಣೆಯಿಂದ ಆಚರಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಕಾಡಪ್ಪ,,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಜೆಡಿಎಸ್ ಯುವ ಮುಖಂಡ ಸ. ಬಾ ಭಾಸ್ಕರ್, ಪುರಸಭಾ ಸದಸ್ಯರು, ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಕನ್ನಡ ಬಾವುಟದ ಅಭಿಯಾನದಲ್ಲಿ ಪಕ್ಷದ ಎಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದೆ ವೇಳೆ ಪಟ್ಟಣದ ಆಟೋ ಹಾಗೂ ಕಾರು ಮಾಲೀಕರು, ಚಾಲಕರಿಗೆ ಕನ್ನಡ ಬಾವುಟ ವಿತರಣೆ ಮಾಡಿದರು.