Sunday, November 24, 2024
Homeಸುದ್ದಿಗಳುರಾಜ್ಯಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಎನ್‍ಐಎ (NIA) ತಂಡದಿಂದ ದಾಳಿ ಮುಂದುವರಿದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಇಂದು ಬೆಳ್ಳಂಬೆಳ್ಳಗ್ಗೆ ನಿಷೇಧಿತ ಪಿಎಫ್‍ಐ (PFI) ಮುಖಂಡರ ಮನೆಗಳ ಮೇಲೆ ಎನ್‍ಐಎ (NIA) ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ 6 ಕಡೆಗಳಲ್ಲಿ ದಾಳಿ ನಡೆಸಿ ಪಿಎಫ್‍ಐ ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಡಿಪಿಐ (SDPI) ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬೆಳಗಿನ ಜಾವ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಎನ್‍ಐಎಯಿಂದ ಬಂಧಿತ ಆರೋಪಿಗಳಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಕಲ್ ಟೆಸ್ಟ್ ಮಾಡಿಸಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿಸಿ ಆರೋಪಿಗಳನ್ನು ಬೆಂಗಳೂರು ಕಡೆಗೆ ಎನ್‍ಐಎ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇಂದು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ, ಡಿಸಿಪಿ ಎದುರು ಹಾಜರುಪಡಿಸುವ ಸಾಧ್ಯತೆಯಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ (Putturu) ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಶೋಧ ಕಾರ್ಯ ನಡೆಸುತ್ತಿದೆ

RELATED ARTICLES
- Advertisment -spot_img

Most Popular