ಸಕಲೇಶಪುರ:ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಲು-ಬಾಯಿ ರೋಗ ಲಸಿಕಾ ಅಭಿಯಾನವನ್ನು ದಿನಾಂಕ 07/11/2022 ರಿಂದ 07/12/2022 ರವರೆಗೆ ಹಮ್ಮಿಕೊಳ್ಳಲಾಗಿದೆ. ಸಕಲೇಶಪುರ ತಾಲ್ಲೂಕಿನ ಎಲ್ಲಾ ರೈತ-ಬಾಂಧವರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಕಾರ್ಯಕ್ರಮದ ಸದುಪಯೋಗ ಪಡೆದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪಶುಪಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ವೆಂಕಟೇಶ್ ಮನವಿ ಮಾಡಿದ್ದಾರೆ.