ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota shrinivas poojari) ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ (ನ.15) ಕೋಟ ಶ್ರೀನಿವಾಸ ಪೂಜಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ.