Tuesday, November 26, 2024
Homeಸುದ್ದಿಗಳುಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ದ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ,ಸಕಲೇಶಪುರ ತಾಲೂಕು ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಕಲೇಶಪುರ ಪಟ್ಟಣದ ಪುರಭವನದಲ್ಲಿ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ದ ಜಾಗೃತಿ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗುವ ಮುಖಾಂತರ ಉದ್ಘಾಟಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕಿ ಮಮತಾ ಹರೀಶ್ ರಾವ್ ಮಾತನಾಡಿ ಗಾಂಧಿಜಿ ಕಂಡ ಕನಸನ್ನು ಡಾ.ವೀರೇಂದ್ರ ಹೆಗ್ಗಡೆಯವರು ಇಂದು ನೆನಸು ಮಾಡುತ್ತಿದ್ದಾರೆ.ಮಧ್ಯಮುಕ್ತ ರಾಜ್ಯದ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ‌.ನವೀನ್ ಚಂದ್ರ ಶೆಟ್ಟಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ತಾಲೂಕಿನಲ್ಲಿ ನಿರಂತರವಾಗಿ ಹಲವಾರು ಸೇವಾ ಚಟುವಟಿಕೆಗಳನ್ನು ಮಾಡಲಾಗುತ್ತಿದೆ.ಶೀಘ್ರದಲ್ಲಿ ಮತ್ತೊಮ್ಮೆ ತಾಲೂಕಿನಲ್ಲಿ ಮಧ್ಯವರ್ಜನ ಶಿಬಿರ ಮಾಡಲಾಗುವುದು ಎಂದರು.

ಪೋಲಿಸ್ ಉಪಾಅಧೀಕ್ಷಕ ಲಕ್ಕೇಗೌಡ್ರು ಮಾತನಾಡಿ ಕುಡುಕರು ಪೋಲಿಸರನ್ನು ಕಂಡರೆ ಓಡಿ ಬಂದು ಚೇಷ್ಟೆ‌‌ ಮಾಡುತ್ತಾರೆ. ಕುಡುಕರಿಗೆ ಮೈಮೇಲೆ ಪ್ರಜ್ಞೆನೆ ಇರುವುದಿಲ್ಲ, ಮಧ್ಯ ವ್ಯಸನಿಗಳಿಂದ ಸಮಸ್ಯೆ ಹೆಚ್ಚಾಗಿದೆ.ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಕಾರಣದಿಂದ ಮದ್ಯವ್ಯಸನಿಗಳ ಸಂಖ್ಯೆ ತುಸು ಕಡಿಮೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭಾ ಅಧ್ಯಕ್ಷ ಕಾಡಪ್ಪ ನೆರವೇರಿಸಿದರೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಉಮಾನಾಥ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ ಮುಖ್ಯ ಅತಿಥಿಗಳಾಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಗಿರೀಶ್ ಮಂಜುನಾಥ್, ಧರ್ಮರಾಜ್, ರಾಮಚಂದ್ರ, ಲಕ್ಷ್ಮಣ್, ಧರ್ಮಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -spot_img

Most Popular