ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ವೀಕ್ಷಿಸಿದ ಜಿಲ್ಲಾಧಿಕಾರಿ ಅರ್ಚನ.
ಸಕಲೇಶಪುರ : ಮತದಾರ ಪಟ್ಟಿಯಲ್ಲಿ ತಮ್ಮ ಹೆಸರಲ್ಲಿ ಇಲ್ಲದವರು ಕೂಡಲೇ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದರು.
ಮಂಗಳವಾರ ತಾಲೂಕಿನ ಬಾಳ್ಳುಪೇಟೆಯ ಬನವಾಸೆ ಗ್ರಾಮಕ್ಕೆ ಭೇಟಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಸಿಬ್ಬಂದಿಗಳ ಕಾರ್ಯವೈಕರಿಯನ್ನು ವೀಕ್ಷಿಸಿ ಮಾತನಾಡಿದರು.
ಬಿ.ಎಲ್.ಒ ಗಳು ಪ್ರತಿ ಮನೆ ಮನೆಗೆ ತೆರಳಿ ಮತದಾರ ಪರಿಷ್ಕರಣೆ ಕಾರ್ಯವನ್ನ ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೇಘನ, ರಾಜಸ್ವ ನಿರೀಕ್ಷಕರಾದ ಅಭಿಲಾಶ್, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.