ಸಕಲೇಶಪುರ : ಸಕಲೇಶಪುರ ಪಟ್ಟಣದ ಉದ್ಯಮಿಗಳಾಗಿದ್ದ ಲೋಕೇಶ್ ನಾಯ್ಡು (50) ಅವರು ಕಳೆದ ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದ್ದು ಇಂದು ಬೆಳಗ್ಗೆ ಸ್ಥಳೀಯರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ತಕ್ಷಣವೇ ಕ್ರಾಫರ್ಡ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾದರೂ ಪ್ರಯೋಜನ ವಾಗಿಲ್ಲ. ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲೆ ಮರಣೋತ್ತರ ಪರೀಕ್ಷೆ ನಡೆದಿದ್ದು ಸಂಜೆಯ ವೇಳೆಗೆ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ.