ಸಕಲೇಶಪುರ:ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ಕಾಡಾನೆ ಹಾವಳಿಗೆ ಜನ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸದ ಕಾರಣ , ನಾಳೆ ದಿನಾಂಕ ೦2.12.2022ರ ಶುಕ್ರವಾರ ವಳಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಳಲಹಳ್ಳಿಯ ಹಿರಿಯೂರು ಕೂಡಿಗೆಯಲ್ಲಿ ಬೆಳಗ್ಗೆ 10 .30 ರಿಂದ ಕಾಡಾನೆ ಹಾವಳಿ ಯನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅದರ ಪೂರ್ವಭಾವಿ ಸಭೆಯನ್ನು ಇಂದು ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ಕಚೇರಿಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿಯ ವ್ಯಾಪ್ತಿ ಕಾಡಾನೆ ಸಮಸ್ಯೆಗೆ ಕೂಡಲೇ ಸರ್ಕಾರ ಹಾಗೂ ಜನ ಪ್ರತಿನಿಧಿಗಳು ಸಂದಿಸಿ ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಮಾಡುವುದಾಗಿ ತೀರ್ಮಾನಿಸಲಾಯಿತು.ಸದರಿ ಪ್ರತಿಭಟನೆಯಲ್ಲಿ ಬೆಳೆಗಾರರ ಸಂಘ, ಗ್ರಾಮಪಂಚಾಯಿತಿ ವ್ಯಾಪ್ತಿಯ ರೈತರುಗಳು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಈ ಭಾಗದ ಎಲ್ಲಾ ಚುನಾಯಿತ ಪ್ರತಿಸಿಧಿಗಳು, ಸ್ತ್ರೀಶಕ್ತಿ ಸಂಘ ಹಾಗೂ ಧರ್ಮಸ್ಥಳ ಸಂಘ , ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರು ಬಣ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ,ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಿದ್ದಾರೆ.