Monday, April 21, 2025
Homeಸುದ್ದಿಗಳುತುಮಕೂರಿನಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಚ್. ನಿಂಗಪ್ಪ ರಾಜೀನಾಮೆ, ಕಾಂಗ್ರೆಸ್ ಕಡೆ...

ತುಮಕೂರಿನಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಚ್. ನಿಂಗಪ್ಪ ರಾಜೀನಾಮೆ, ಕಾಂಗ್ರೆಸ್ ಕಡೆ ಪಯಣ

ತುಮಕೂರಿನಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಚ್. ನಿಂಗಪ್ಪ ರಾಜೀನಾಮೆ, ಕಾಂಗ್ರೆಸ್ ಕಡೆ ಪಯಣ

ತುಮಕೂರು ಜಿಲ್ಲೆಯ ಪ್ರಮುಖ ನಾಯಕರೊಬ್ಬರು ಜೆಡಿಎಸ್‌ಗೆ ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕ ಎಚ್. ನಿಂಗಪ್ಪ ಅವರು ಕಾಂಗ್ರೆಸ್‌ನತ್ತ ಪಯಣ ಆರಂಭಿಸಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಎಚ್. ನಿಂಗಪ್ಪ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಎನ್ನಲಾಗಿದ್ದು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಇರಾದೆ ಹೊಂದಿದ್ದಾರೆ.

ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ

ನಿಂಗಪ್ಪ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 2004ರಲ್ಲಿ ಕುಣಿಗಲ್ ಕ್ಷೇತ್ರದಿಂದ ಶಾಸಕರಾಗಿದ್ದ ಎಚ್.ನಿಂಗಪ್ಪ ಅವರು 2008ರಲ್ಲಿ ತುಮಕೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿ ಸೋತಿದ್ದರು. 2013ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಸಿಗದಿದ್ದಾಗ ಕೆಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಅಲ್ಲಿ ಸೋತ ಬಳಿಕ ಕಾಂಗ್ರೆಸ್ ಸೇರಿದ್ದರು. ಮತ್ತೆ 2018ರಲ್ಲಿ ಜೆಡಿಎಸ್‌ಗೆ ಮರಳಿದ್ದರು.

RELATED ARTICLES
- Advertisment -spot_img

Most Popular