ಸಣ್ಣ ಕಾಫಿ ಬೆಳಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ.
ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದ ಕರ್ನಾಟಕ ಪ್ರಾಂತ ರೈತ ಸಂಘ.
ಸಕಲೇಶಪುರ : ಕಾಫಿ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಭಾರತದಲ್ಲಿ ಒಟ್ಟು ಕಾಫಿ ಉತ್ಪಾದನೆಯಲ್ಲಿ ಶೇಖಡ 60 ಕ್ಕೂ ಹೆಚ್ಚು ಕರ್ನಾಟಕದಲ್ಲೇ ನಡೆಯುತ್ತದೆ. ಇದರಲ್ಲಿ ಶೇಖಡ 90 ಕ್ಕಿಂತ ಹೆಚ್ಚು ಸಣ್ಣಬೆಳೆಗಾರರು ಕಾಫಿ ಕೃಷಿಯ ಮೂಲಕ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿರುವ ಸಣ್ಣ ಬೆಳೆಗಾರರರು ಕಾಫಿ ಕೃಷಿಯಲ್ಲಿ ಅತಿ ಹೆಚ್ಚು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್. ಆರ್ ನವೀನ್ ಕುಮಾರ ಹೇಳಿದರು.
ಸೋಮವಾರ ಕಾಫಿ ಬೆಳಗಾರರ ದಿನದ ಹಿನ್ನೆಲೆಯಲ್ಲಿ ಸಣ್ಣ ಬೆಳಗಾರರ ಬೇಡಿಕೆಗಳನ್ನು ಬಗೆಹರಿಸುವಂತೆ ಅಗ್ರಹಿಸಿ ಮಿನಿವಿಧಾನಸೌಧ ಎದುರು ಪ್ರತಿಭಟನೆ ನೆಡೆಸಿ ತಹಸೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತಾಡಿದರು.
ಒಂದೆಡೆ ಪ್ರಕೃತಿಯ ವೈಪರಿತ್ಯದಿಂದಾಗಿ ಬೆಳೆ ಸರಿಯಾಗಿ ಕೈಗೆ ಸೇರದಿರುವುದು, ಬೆಳೆಗೂ ನ್ಯಾಯಯುತವಾದ ಬೆಲೆ ಸಿಗದಿರುವುದು. ಮತ್ತೊಂದೆಡೆ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬೆಳೆ ನಾಶದ ಜೊತೆಗೆ ಪ್ರಾಣಹಾನಿಗಳು ಸಂಬವಿಸುತ್ತಿವೆ. ಆನೆಗಳ ದಾಳಿಗಳಿಂದಾಗಿ ರೈತರು ಮತ್ತು ಕಾರ್ಮಿಕರು ಪ್ರತೀ ದಿನ ತೋಟಗಳಲ್ಲಿ ಭಯದಿಂದ ಕೆಲಸ ಮಾಡುವ ಮತ್ತು ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಆನೆಗಳ ದಾಳಿಯನ್ನು ನಿಯಂತ್ರಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ರಾಜಕೀಯ ಇಚ್ಚಾಶಕ್ತಿಯನ್ನು ತೋರಿಸುತ್ತಿಲ್ಲ. ಇದರಿಂದಾಗಿ ಈ ಭಾಗದ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ನಷ್ಟಕ್ಕೊಳಗಾದ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಸಿಗುತ್ತಿಲ್ಲ. ಮಾತ್ರವಲ್ಲದೆ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ನೆರವು ಮತ್ತು ಪರಿಹಾರ ದೊರೆಯದೆ ಆ ಕುಟುಂಬಗಳು ಅನಾಥವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆನೆಗಳ ಹಾವಳಿಯನ್ನು ತಡೆಗಟ್ಟಲು ರೈತರು ಮತ್ತು ಕಾರ್ಮಿಕರ ಪ್ರಾಣಗಳನ್ನು ಉಳಿಸಿ, ಬೆಳೆ ನಾಶವನ್ನು ತಡೆಗಟ್ಟಿ ಎಲ್ಲರೂ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಿರ್ಮಾಣಮಾಡಲು ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಾಶ್ವತ ಪರಿಹಾರವನ್ನು ಒದಗಿಸಬೇಕಾಗಿದೆ ಎಂದು ರಾಜ್ಯ ಸರ್ಕಾರವನ್ನು ಅಗ್ರಹಿಸಿದರು.
ಕಾಫಿ ಉತ್ಪಾದನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವ ಸಣ್ಣಬೆಳೆಗಾರರು ಭೂಮಿಗೆ ಸಂಭದಿಸಿದ ಹಲವು ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಉಳುಮೆ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಸರ್ಕಾರಿ ಭೂಮಿ, ಅರಣ್ಯ ಭೂಮಿಯ ಮಂಜೂರಾತಿಗಾಗಿ ಸರ್ಕಾರದ ಮುಂದೆ ಅರ್ಜಿಗಳನ್ನು ಸಲ್ಲಿಸಿ ಬಗರ್ ಹುಕುಂ ಸಾಗುವಳಿ ಮಂಜೂರಾತಿಗಾಗಿ ಕಾಯುತ್ತಿದ್ದಾರೆ.
ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕಾಫಿ ಪಾರ್ಮನ್ಸ್ ಫೆಡರೇಷನ್ ಆಫ್ ಇಂಡಿಯಾ ಮತ್ತು ಕರ್ನಾಟಕ ಪ್ರಂತ ರೈತ ಸಂಘಕ್ಕೆ ಸೇರ್ಪಡೆಯಾಗಿರುವ ಕರ್ನಾಟಕ ಕಾಫಿ ಬೆಳೆಗಾರರ ಸಂಘವು ಒತ್ತಾಯಸುತ್ತದೆ ಎಂದು ಹೇಳಿದರು.
ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಗಿಡ್ಡೆಗೌಡ,ಸುಮಾ ವಡೂರು, ಸೇರಿದಂತೆ ಮುಂತಾದವರಿದ್ದರು.