ಡಿ.8 ರಂದು ಸಕಲೇಶಪುರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಭೇಟಿ.
ಸಕಲೇಶಪುರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಆಯೋಜನೆ.
ಕೇಂದ್ರ ಸರ್ಕಾರಕ್ಕೆ ಕಾಡಾನೆ ಹಾವಳಿ ಬಗ್ಗೆ ಮನವರಿಕೆ ಮಾಡಿಕೊಡಲು ಶೀಘ್ರದಲ್ಲಿ ಸಂಸದರ ನೇತೃತ್ವದಲ್ಲಿ ದೆಹಲಿಗೆ ನಿಯೋಗ
ಸಕಲೇಶಪುರ : ತಾಲೂಕಿನಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಈ ನಿಟ್ಟಿನಲ್ಲಿ ಖುದ್ದು ಪರಿಶೀಲನೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಡಿಸೆಂಬರ್ 8 ಗುರುವಾರ ಮಧ್ಯಾಹ್ನ 3 ಗಂಟೆಗೆ ಸಕಲೇಶಪುರಕ್ಕೆ ಆಗಮಿಸುತ್ತಿದ್ದಾರೆ.
ಇದುವರೆಗೂ ಕಾಡಾನೆ ವಿಚಾರವಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದು ಜನಪ್ರತಿನಿಧಿಗಳು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಡಿಸೆಂಬರ್ 8ರಂದು ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳು , ಕಾಡಾನೆ ಹಾವಳಿ ಹೋರಾಟ ಸಮಿತಿ ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿ ದೆಹಲಿಗೆ ನಿಯೋಗವನ್ನು ಕೊಂಡೊಯ್ಯಲು ಸಂಸದರು ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಗುರುವಾರ ನಡೆಯುವ ಸಭೆ ಮಹತ್ವ ಪಡೆದುಕೊಂಡಿದೆ.