ಸಕಲೇಶಪುರ : ತಾಲೂಕಿನ ಬಾಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೆ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ ಜಿಂಕೆ ಒಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೀದಿ ನಾಯಿಗಳು ಜಿಂಕೆಯ ತೊಡೆ ಬಾಗಕ್ಕೆ ಕಚ್ಚಿರುವುದು ಕಂಡು ಬಂದಿದೆ. ಇದರಿಂದಾಗಿ ಜಿಂಕೆ ತೀವ್ರ ಗಾಯದಿಂದ ನಡೆದಾಡಲು ಕಷ್ಟ ಪಡುತ್ತಿದೆ. ತಕ್ಷಣವೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯವನ್ನು ಮುಟ್ಟಿಸಿದ್ದಾರೆ. ಆದರೆ, ಅರಣ್ಯ ಇಲಾಖೆ ಸಿಬ್ಬಂದಿಗಳು ಸುಮಾರು ಎರಡು ತಾಸುವಾದರೂ ಸ್ಥಳಕ್ಕೆ ಬಾರದೆ ಇರುವುದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಂಕೆ ಪ್ರಾಣಕ್ಕೆ ತೊಂದರೆಯಾದರೆ ಅದಕ್ಕೆ ಅರಣ್ಯ ಇಲಾಖೆಗಳ ನಿರ್ಲಕ್ಷವೇ ಕಾರಣ ಎಂದು ಹೇಳಿದರು
ಈ ಸಂಬಂಧ ಬಾಗೆ ಗ್ರಾಮ ಪಂಚಾಯಿತಿ ಸದಸ್ಯ ಚಾರ್ಲ್ಸ್ ಮಾತನಾಡಿ, ಗಾಯಗೊಂಡಿರುವ ಜಿಂಕೆಯನ್ನು ಕಂಡ ತಕ್ಷಣ ಗ್ರಾಮಸ್ಥರು ಪ್ರಥಮ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆಯವರು ತಮ್ಮ ನಿರ್ಲಕ್ಷತನದ ಪರಮಾವಧಿ ಪ್ರದರ್ಶನ ಮಾಡುತ್ತಿರುವುದರಿಂದ ಜಿಂಕೆ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ