20ಕ್ಕೂ ಹೆಚ್ಚು ಬಸ್ಸುಗಳನ್ನು ತಡೆದು ಪ್ರತಿಭಟನೆ ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ತಾಲೂಕಿನ ಬಾಳ್ಳುಪೇಟೆಯಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಜರುಗಿದೆ.
ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತದೆ ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನೆಡೆಯಿತು.ಬಾಳ್ಳುಪೇಟೆ, ಹೊಂಕರವಳ್ಳಿ, ಹೊಸಕೋಟೆ,ಕೇರೋಡಿ ಮಾಗಲು, ಜೆಪಿ ನಗರ ಸೇರಿದಂತೆ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಜಿಲ್ಲಾ ಕೇಂದ್ರ ಹಾಸನಕ್ಕೆ ತೆರಳುತ್ತಾರೆ ಆದರೆ ಸಕಲೇಶಪುರ ಡಿಪೋದಿಂದ ಸೂಕ್ತ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ಶಾಲಾ ಕಾಲೇಜಿಗೆ ತೆರಳಲು ಅನಾನುಕೂಲವಾಗುತ್ತಿದೆ ಬೆಳಗಿನ ಸಮಯದಲ್ಲಿ ಸಕಲೇಶಪುರದಿಂದ ಹಾಸನಕ್ಕೆ ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಮುಂದಿನ ತಿಂಗಳಿನಿಂದ ಶಾಲಾ ಕಾಲೇಜುಗಳಲ್ಲಿ ಪರೀಕ್ಷೆ ಪ್ರಾರಂಭವಾಗುತ್ತಿದೆ ಆದರೆ ಅಸಮರ್ಪಕ ಬಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ಬರಲಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಬಾಳ್ಳುಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಮಾತನಾಡಿ ಸಕಲೇಶಪುರದಿಂದ ಹಾಸನಕ್ಕೆ ಬಾಳ್ಳುಪೇಟೆ ಗ್ರಾಮಕ್ಕೆ ಬಾರದೆ ಬೈಪಾಸ್ ರಸ್ತೆಯಲ್ಲಿ ಚಲಿಸುವುದರಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಸಿಗದೇ ಅನಾನುಕೂಲವಾಗುತ್ತಿದೆ ಈ ಬಗ್ಗೆ ಗ್ರಾಮಸಭೆಗೆ ಸಾರಿಗೆ ಇಲಾಖೆಯ ಅಧಿಕಾರಿಗಳನ್ನು ಅಹ್ವಾನಿದರೆ ಸಭೆಗೆ ಬಾರದೆ ಉಡಾಫೆ ಪ್ರದರ್ಶನ ತೋರುತ್ತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಅಗ್ರೋಕ್ಷ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ನಾಳೆಯಿಂದ ಹೆಚ್ಚುವರಿಯಾಗಿ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಾಗುವುದು ಹಾಗೂ ಬಾಳ್ಳುಪೇಟೆ ವೃತದಲ್ಲಿ ಟಿಸಿ ಪಾಯಿಂಟ್ ತೆರೆಯಲಾಗುತ್ತದೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು
ಈ ಸಂದರ್ಭದಲ್ಲಿ ವೃತ ನಿರೀಕ್ಷಕ ಚೈತನ್ಯ, ಪಿಎಸ್ಐ ಖಾತಿಜಾ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಆರ್ ಎಸ್ ದಿನೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸ್ವಾಮಿ, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಖಂಡರಗಳಾದ ಉದೀಶ್, ಕಲಿಮುಲ್ಲ ಸೇರಿದಂತೆ ಮುಂತಾದವರಿದ್ದರು