ಕೌಕೋಡಿ ಸೇತುವೆ ಕುಸಿತ ಪ್ರಕರಣ: ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್.
ಶಾಸಕ ಎಚ್ ಕೆ ಕುಮಾರಸ್ವಾಮಿ ಅವರ ನಿರ್ಲಕ್ಷವೇ ಕಾರಣ ಎಂದು ಆರೋಪ.
ಸಕಲೇಶಪುರ: ಯಸಳೂರು ಹೋಬಳಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೌಕೋಡಿ ಹಾಗೂ ಹೊಸರಳ್ಳಿಗೆ ಸಂಪರ್ಕಿಸುವ ಸೇತುವೆ ಅಕಾಲಿಕ ಮಳೆಗೆ ಕುಸಿತ ಪ್ರಕರಣ ವಿರುದ್ಧ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಅನುದಾನದಲ್ಲಿ ನಿರ್ಮಾಣಗೊಂಡಿರುವ ಸೇತುವೆ ಅಧಿಕಾರಿಗಳು ಹಾಗೂ ಶಾಸಕರ ನಿರ್ಲಕ್ಷದಿಂದ ಕಳಪೆಯಿಂದ ಕೂಡಿದ್ದು ಕುಸಿತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ರಸ್ತೆ ಹಾಗೂ ಸೇತುವೆ ನಿರ್ಮಾಣದ ಸಮಯದಲ್ಲಿ ಸರಿಯಾಗಿ ಪರಿಶೀಲಿಸದೆ ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಕಾಮಗಾರಿ ನಡೆಸಲು ಅವಕಾಶ ನೀಡಿದ ಫಲವಾಗಿ ಇಂದು ಗ್ರಾಮಸ್ಥರು ಸಂಪರ್ಕ ಕಡಿತವಾಗುವ ಆತಂಕವನ್ನು ಎದುರಿಸುತ್ತಿದ್ದಾರೆ ಶಾಸಕರು ಈ ಬಗ್ಗೆ ಗಮನವಹಿಸಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಶಾಸಕ ಎಸ್ ಕೆ ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಿ ಆ ಭಾಗದ ಜನರಿಗೆ ಸುಸಜ್ಜಿತವಾಗಿ ಸಂಚರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.