Monday, November 25, 2024
Homeಸುದ್ದಿಗಳುಸಕಲೇಶಪುರಸರ್ಕಾರಿ ಕಾರ್ಯಮವನ್ನು ಜೆಡಿಎಸ್ ಕಾರ್ಯಕ್ರಮ ಮಾಡಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಬಿಜೆಪಿ ಮುಖಂಡ ಸಿಮೆಂಟ್...

ಸರ್ಕಾರಿ ಕಾರ್ಯಮವನ್ನು ಜೆಡಿಎಸ್ ಕಾರ್ಯಕ್ರಮ ಮಾಡಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಬಿಜೆಪಿ ಮುಖಂಡ ಸಿಮೆಂಟ್ ಮಂಜು ಆಗ್ರಹ

ಸಕಲೇಶಪುರ: ಹೊಸಹಳ್ಳಿ ಗ್ರಾ.ಪಂಯಲ್ಲಿ ನಡೆದ ಪ್ಯಾರಾ ಗ್ಲೈಡಿಂಗ್ ಚಾಲನೆ ಕಾರ್ಯಕ್ರಮಕ್ಕೆ ಸ್ಥಳೀಯ ಗ್ರಾ.ಪಂ ಅಧ್ಯಕ್ಷರನ್ನು ಆಹ್ವಾನಿಸದೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಸಿಮೆಂಟ್ ಮಂಜು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ವಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹೊಸಹಳ್ಳಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆದ ಪ್ಯಾರಾ ಗ್ಲೈಡಿಂಗ್ ಚಾಲನೆ ಕಾರ್ಯಕ್ರಮಕ್ಕೆ ಶಾಸಕ ಎಚ್.ಕೆ ಕುಮಾರಸ್ವಾಮಿರವರು ತಮ್ಮ ಪತ್ನಿಯನ್ನು ಕರೆದುಕೊಂಡು ಹೋಗಲು ತೋರುವ ಉತ್ಸಾಹವನ್ನು ಗ್ರಾ.ಪಂ ಅಧ್ಯಕ್ಷರನ್ನು ಕರೆಯಲು ಏಕೆ ತೋರಲಿಲ್ಲ.  ವಳಲಹಳ್ಳಿ ಗ್ರಾ.ಪಂಯ ಚುನಾಯಿತ ಪ್ರತಿನಿಧಿಗಳು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ ಎಂಬ ಒಂದೇ ಕಾರಣಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಶಾಸಕರು ದೂರವಿಟ್ಟು ಕಾರ್ಯಕ್ರಮ ನಡೆಸಿದ್ದಾರೆ. ಸರ್ಕಾರಿ ಕಾರ್ಯಕ್ರಮವನ್ನು ಜೆಡಿಎಸ್ ಕಾರ್ಯಕ್ರಮದಂತೆ ಮಾಡಲಾಗಿದ್ದು ಇದಕ್ಕೆ ಕಾರಣರಾಗಿರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಸಲ್ಲಿಸುತ್ತೇವೆ ಎಂದಿದ್ದಾರೆ.

RELATED ARTICLES
- Advertisment -spot_img

Most Popular