ಹೆತ್ತೂರು ಕಾಲೇಜಿನಲ್ಲಿ ಸಾವಿತ್ರಿಬಾಯಿ ಫುಲೆ ದಿನಾಚರಣೆ.
ಹೆತ್ತೂರು; ಹೆತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆಯನ್ನು ಆಚರಿಸಿದರು. ವಿದ್ಯಾರ್ಥಿನಿ ಸುಪ್ರಿತಾ ಸಾವಿತ್ರಿಬಾಯಿ ಫುಲೆಯವರ ಜೀವನ, ಸಾಮಾಜಿಕ ಕ್ರಾಂತಿ, ಮಹಿಳಾ ಶಿಕ್ಷಣಕ್ಕೆ ಕೊಡುಗೆಗಳ ಕುರಿತು ಮಾತನಾಡಿದರು. ಕುಮಾರಿ ಮುಕ್ತ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.