ಸಕಲೇಶಪುರ: ಅರ್ಹ ಫಲಾನುಭವಿಗಳಿಗೆ 94 ಸಿ ಯಡಿ ಕಾಲಮಿತಿಯೊಳಗೆ ಹಕ್ಕು ಪತ್ರಗಳನ್ನು ವಿತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಶಾಸಕ ಕುಮಾರ ಸ್ವಾಮಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಯ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ನಂತರ ಶಾಸಕರು ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ಇಂದು ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಹಕ್ಕುಪತ್ರ ನೀಡಲು ಸಣ್ಣ ಪುಟ್ಟ ಕಾನೂನು ತೊಡಕುಗಳು ಇದ್ದರೆ ಅಧಿಕಾರಿಗಳು ತಕ್ಷಣ ಸಮಸ್ಯೆಗಳನ್ನು ಬಗೆಹರಿಸಿ ಬಡವರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮೇಘನಾ ಮತ್ತಿತರ ಅಧಿಕಾರಿಗಳು ಹಾಜರಿದ್ದರು