ಸಕಲೇಶಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಜೆಡಿಎಸ್ ಪಕ್ಷಕ್ಕೆ ಆರ್ಶೀವಾದ ಮಾಡಿದಲ್ಲಿ ಕಾಫಿ ಬೆಳೆಗಾರರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಲಯನ್ಸ್ ಭವನದಲ್ಲಿ ಸೋಮವಾರ ಸಂಜೆ ಜೆಡಿಎಸ್ ಪಕ್ಷದ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿರವರಿಂದ ರೈತರಿಗಾಗಿ ಆಯೋಜಿಸಲಾಗಿದ್ದ ವಿಡಿಯೋ ಕಾನರೆನ್ಸ್ ಮೂಲಕ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಲೆನಾಡಿನ ಜನತೆ ಜೆಡಿಎಸ್ ಪಕ್ಷಕ್ಕೆ ಮತ್ತೊಮ್ಮೆ ಆರ್ಶೀವಾದ ಮಾಡಿದರೆ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೇರಲು ಸಹಾಯವಾಗುತ್ತದೆ. ಪಕ್ಷ ಅಧಿಕಾರಕ್ಕೇರಿದೆರೆ ಕಾಡಾನೆ ಸಮಸ್ಯೆ ಸೇರಿದಂತೆ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುತ್ತೇವೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಎಚ್ ಕೆ ಕುಮಾರಸ್ವಾಮಿ, ಬೆಳೆಗಾರರ ಸಂಘದ ಅಧ್ಯಕ್ಷ ಮೊಹನ್, ಪುರಸಭ ಸದಸ್ಯ ಪ್ರಜ್ವಲ್, ಮಾಜಿ ಜಿ.ಪಂ ಸದಸ್ಯರುಗಳಾದ ಚಂಚಲಾ ಕುಮಾರಸ್ವಾಮಿ, ಉಜ್ಮಾ ರುಜ್ವಿ, ಆಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ಮಂಜೇಗೌಡಮ ಜೆಡಿಎಸ್ ಮುಖಂಡರುಗಳಾದ ಸಚ್ಚಿನ್ ಪ್ರಸಾದ್, ಸ.ಬ ಭಾಸ್ಕರ್, ಕವನ್ ಗೌಡ, ಬಾಗೆ ಗ್ರಾ.ಪಂ ಅಧ್ಯಕ್ಷ ಜಯಶಂಕರ್ ಸೇರಿದಂತೆ ಇತರರು ಹಾಜರಿದ್ದರು.