ಸಕಲೇಶಪುರ: ಮಕ್ಕಳಿಗೆ ಶಾಲೆಯಲ್ಲಿ ಶಿಕ್ಷಕರು ಕಲಿಯಲು ಉತ್ತಮ ವಾತಾವರಣವನ್ನು ನಿರ್ಮಾಣ ಮಾಡಬೇಕೆಂದು ಮಾಜಿ ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ , ಸಕಲೇಶಪುರ, ಸರ್ಕಾರಿ ಪ್ರೌಡಶಾಲೆ ಮಾರನಹಳ್ಳಿ, ಇವರ ಸಹಯೋಗದಲ್ಲಿ ದೋಣಿಗಲ್ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬ ವನ್ನು ತಾಲೂಕಿನ ಸತ್ತಿಗಾಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಶಿಕ್ಷಕರು ಮಾಡಿದ ಪಾಠವನ್ನು ಮಕ್ಕಳು ಹೇಗೆ ಗ್ರಹಿಸುತ್ತಾರೆ ಎಂಬುದು ಮುಖ್ಯ, ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳ ಮನಸ್ಥಿತಿಯನ್ನು ನೋಡಿಕೊಂಡು ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಇದರಿಂದ ಮಕ್ಕಳ ಪ್ರತಿಭೆಯನ್ನು ಹೊರ ತೆಗೆಯಲು ಸಾಧಗಯ ಎಂದರು. ಕಾರ್ಯಕ್ರಮದ ಅಂಗವಾಗಿ ಊರಿನ ಮುಂಭಾಗದಿಂದ ಕಳಸ ಮೆರವಣಿಗೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಕಾಫಿ ಬೆಳೆಗಾರ ಪುಟ್ಟಸ್ವಾಮಿ ಗೌಡ್ರು, ಕಸಾಪ ಮಾಜಿ ತಾಲೂಕು ಅಧ್ಯಕ್ಷ ಜೈಮಾರುತಿ ದೇವರಾಜ್, ಗ್ರಾ.ಪಂ ಅಧ್ಯಕ್ಷ ಅಶ್ರಫ್, ಮುಖ್ಯ ಶಿಕ್ಷಕ ಜಗದೀಶ್, ಗ್ರಾ.ಪಂ ಎಸ್.ಡಿ.ಎಂ.ಸಿ ಅಧ್ಯಕ್ಷ ಪೃಥ್ವಿರಾಜ್, ಎಸ್.ಡಿ.ಎಂ.ಸಿ ಸದಸ್ಯ ರವಿ, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.