ಸಕಲೇಶಪುರ : ಉದೇವಾರ ದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ.
ತಹಸೀಲ್ದಾರ್ ಮೇಘನಾರಿಂದ ಕಾರ್ಯಕ್ರಮ ಉದ್ಘಾಟನೆ.
ಸಕಲೇಶಪುರ : ಪ್ರತಿ ತಿಂಗಳು ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮ ನಡೆಯುತ್ತಿದ್ದು ಇಂದು ತಾಲೂಕಿನಲ್ಲಿ ಬೆಳಗೋಡು ಹೋಬಳಿ ಉದೇವಾರ ಗ್ರಾಮದಲ್ಲಿ ತಹಸೀಲ್ದಾರ್ ಮೇಘನಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೆಲಸಗಳಿಗಾಗಿ ಕಚೇರಿಗೆ ಪದೇ ಪದೇ ಅಳೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರ ಸೌಲಭ್ಯಗಳನ್ನು ಹಾಗೂ ದಾಖಲೆಗಳನ್ನು ನಿಮ್ಮ ಗ್ರಾಮಕ್ಕೆ ಬಂದು ಸರಳವಾಗಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಬಾಚಿಹಳ್ಳಿ ಹಾಗೂ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ಪಡೆಯಬೇಕು ಎಂದು ಹೇಳಿದರು.
ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ, ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು ಎಂದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮೈತ್ರಿ ಕಂದಾಯ ನೀರಿಕ್ಷಕ ಅಭಿಲಾಷ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು,ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥಗಳಿದ್ದರು.