ಸಕಲೇಶಪರ: ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಬೆಂಗಳೂರು ವತಿಯಿಂದ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಿತು. ಈ ಸಂಧರ್ಭದಲ್ಲಿ ಬೀದಿ ನಾಟಕ, ನೃತ್ಯಗಳ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ರಸ್ತೆ ಅಪಘಾತದಿಂದ ಪ್ರತಿ ವರ್ಷ ಸುಮಾರು 1.5ಲಕ್ಷಕ್ಕೂ ಹೆಚ್ಚು ಮಂದಿ ರಾಜ್ಯದಲ್ಲಿ ಸಾವನ್ನಪ್ಪುತ್ತಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ದೇಶದಲ್ಲಿ 4 ನೇಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ಸಂಚಾರ ಸುರಕ್ಷತಾ ನಿಯಮಗಳನ್ನು ವಾಹನ ಚಾಲಕರು ಪಾಲಿಸುವ ಮುಖಾಂತರ ಅಪಘಾತಗಳನ್ನು ತಪ್ಪಿಸಬೇಕೆಂದು ತಿಳಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮಾಂತರ ಠಾಣೆಯ ಪಿ.ಎಸ್.ಐ ಬಸವರಾಜ್, ಪೋಲಿಸ್ ಸಿಬ್ಬಂದಿಗಳು, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ತಾಜಾ ಸುದ್ದಿ