ಹೆತ್ತೂರು; ರಾಷ್ಟ್ರೀಯ ಮತದಾರರ ದಿನಾಚರಣೆ
ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾಜಶಾಸ್ತ್ರ ಉಪನ್ಯಾಸಕಿ ವೇದವತಿ ಮತದಾನದ ಅರಿವು, ಅಗತ್ಯತೆ, ಮತದಾರರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲ ಬೆಟ್ಟಹಳ್ಳಿ ಮಂಜುನಾಥ್, ಇತರೆ ಉಪನ್ಯಾಸಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮತದಾರರ ಸಾಕ್ಷರತಾ ಸಂಘದಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ , ಸಕಲೇಶಪುರ ತಾಲ್ಲೂಕು ಮಟ್ಟದ ಮತದಾರರ ದಿನಾಚರಣೆಯ ಅಂಗವಾಗಿ ಜರುಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.