ಸಕಲೇಶಪುರ : ವಿಶ್ವ ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಮೇಘನಾ ಚಾಲನೆ.
ಆರೋಗ್ಯಕ್ಕೆ ಮಾರಕವಾಗಿರುವ ತಂಬಾಕು ಉತ್ಪನ್ನಗಳ ಸೇವನೆ ಸ್ವಯಂ ಪ್ರೇರಿತ ಅಪರಾಧ,’ ಎಂದು ತಹಸೀಲ್ದಾರ್ ಮೇಘನಾ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ ವತಿಯಿಂದ ವಿಶ್ವ ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಹಕರಿಗೆ ಕಂಪನಿಗಳೇ ಎಚ್ಚರಿಕೆಯ ಸಂದೇಶವನ್ನು ಹಾಕಿರುತ್ತವೆ. ಇದನ್ನು ಗಮನಿಸದೆ ಈ ಉತ್ಪನ್ನಗಳನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನಂದ್ ಮೂರ್ತಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹೇಶ್, ಹಿಂದುಳಿದ ಇಲಾಖೆಯ ಪಟ್ಗಾರ್, ಪುರಸಭೆ ಅರೋಗ್ಯಧಿಕಾರಿ ದನೇಂದ್ರ, ಸಿಡಿಪಿಒ ಅಧಿಕಾರಿ ಉಮಾ, ಅರೋಗ್ಯ ಇಲಾಖೆಯ ಬಾಳಪ್ಪ, ರಾಣಿ, ಮಧು ಮತ್ತು ಆಗ್ನೇಸ್