ಅರಕಲಗೂಡು ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎ.ಮಂಜು
ಸಕಲೇಶಪುರ: ಜೀವನವಿಡಿ ಜೆಡಿಎಸ್ ವಿರೋಧಿಸಿಕೊಂಡು ಬಂದಿದ್ದ ಮಾಜಿ ಸಚಿವ ಎ. ಮಂಜು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಫರ್ಧಿಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಎದುರಿಸಿ ಪರಾಜಿತಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಮ್ ಗೌಡ ಬಿಜೆಪಿಯ ಶಕ್ತಿ ಕೇಂದ್ರವಾಗಿದ್ದರಿಂದ ಬಿಜೆಪಿಯಿಂದ ದೂರವಾಗಿದ್ದರು. ಕಾಂಗ್ರೆಸ್ ಮರುಸೇರ್ಪಡೆಗೆ ಸಿದ್ದರಾಮಯ್ಯ ಒಲವು ತೋರದ ಕಾರಣ ಅನಿವಾರ್ಯವಾಗಿ ಎ. ಮಂಜು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.