ಸಕಲೇಶಪುರ : ಸರಕಾರದ ಅದೇಶದ ಅನ್ವಯ ಸಫಾಯಿ ಕರ್ಮಚಾರಿ ಪೌರ ಕಾರ್ಮಿಕರ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಹಾಗೂ ವಸತಿ ಕಲ್ಪಿಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಶಾಂತಿ ಹೇಳಿದರು
ವಾಸ್ತವ ನ್ಯೂಸ್‌ನೊಂದಿಗೆ ಮಾತನಾಡಿ,
ಸಮಾಜ ಕಲ್ಯಾಣ ಇಲಾಖೆಯಡಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಎಲ್ಲಾ ವಸತಿ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರ ಮಕ್ಕಳಿಗೆ ಸಂಪೂರ್ಣ ಉಚಿತ ವ್ಯಾಸಂಗ ಮಾಡಲು ಅವಕಾಶವಿದೆ ಎಂದರು. ಪೌರಕಾರ್ಮಿಕರು ಇದರ ಪ್ರಯೋಜನ ಪಡೆಯಲು ತಮಗೆ ಹತ್ತಿರವಿರುವ ಯಾವುದೇ ವಸತಿ ಶಾಲೆಯನ್ನು ಸಂಪರ್ಕಿಸಬಹುದಾಗಿದೆ.
ಆರನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ವಸತಿ, ಶಾಲೆಗಳಿಗೆ ಪೌರ ಕಾರ್ಮಿಕರು ಕರ್ಮಚಾರಿಗಳು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದಲ್ಲಿ ಸಂಪೂರ್ಣ ಉಚಿತವಾಗಿ ಶಿಕ್ಷಣ ನೀಡುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯ ಏಕಲವ್ಯ, ಇಂದಿರಾ ಗಾಂಧಿ, ಹುತಾತ್ಮರ ವಸತಿ ಶಾಲೆಗಳಲ್ಲಿ ಮುಕ್ತ ಪ್ರವೇಶ ಕಲ್ಪಿಸಲಾಗಿದೆ ಎಂದರು.