ಬಾಗೆ ಗ್ರಾಮದಲ್ಲಿ ಪೊಲೀಸ್ ಇಲಾಖೆಯಿಂದ ಜನ ಸಂಪರ್ಕ ಸಭೆ.
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗುವುದು ಎ. ಎಸ್ಪಿ ಮಿಥುನ್
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಗೆ ಗ್ರಾಮ ಪಂಚಾಯತಿಯಲ್ಲಿ ಅನಧಿಕೃತವಾಗಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಒಂದು ವಾರದ ಹಿಂದೆ ಬಾಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ಮಹಿಳೆಯರು ಪ್ರತಿಭಟನೆ ನೆಡೆಸಿದ್ದರು. ಪ್ರತಿಭಟನೆ ವೇಳೆ ಎ.ಎಸ್ಪಿ ಮಿಥುನ್ ಅವರ ಭರವಸೆಯಂತೆ ಇಂದು ಬಾಗೆ ಗ್ರಾಮದ ಸಮುದಾಯ ಭವನದಲ್ಲಿ ಮಿಥುನ್ ನೇತೃತ್ವದಲ್ಲಿ ಅಬಕಾರಿ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜನ ಸಂಪರ್ಕದಲ್ಲಿ ಜರುಗಿತು.
ಈ ವೇಳೆ ಮಾತನಾಡಿದ ಮಿಥುನ್ ರವರು, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಮುಂದುವರೆದು ಅಕ್ರಮವಾಗಿ ಮದ್ಯ ಮಾರಾಟ ನೆಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಪೊಲೀಸ್ ಇಲಾಖೆ ಹಿಂಜರಿಯುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದರು. ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡುವವರ ಮೇಲೆಯು ಕ್ರಮ ಜರುಗಿಸಲಾಗುವುದು ಎಂದರು.
ಈ ವೇಳೆ ವೃತ್ತ ನೀರಿಕ್ಷಕ ರಾಜು, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಬಸವರಾಜ್, ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ನಾಗರಾಜ್,ಗ್ರಾಮ ಪಂಚಾಯತಿ ಅಧ್ಯಕ್ಷ ಜಯಶಂಕರ್, ಪಿಡಿಒ ಚಿನ್ನಸ್ವಾಮಿ, ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ರಮೇಶ್ ಪೂಜಾರಿ, ಜೈ ಜನನಿ ಮಹಿಳಾ ಸಂಘದ ಅಧ್ಯಕ್ಷೆ ರೂಪ ರಾಜೇಶ್ ಸಂಘದ ವನಜಾಕ್ಷಿ, ಗ್ರಾಮ ಪಂಚಾಯತಿಯ ಸದಸ್ಯರು, ಊರಿನ ಗ್ರಾಮಸ್ಥರು ಹಾಜರಿದ್ದರು.