ವನ ಪಾಲಕ ಸುಂದರೇಶ್ ಸಾವಿಗೆ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಸಂತಾಪ
ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಅತ್ಯಾಧುನಿಕ ಸಲಕರಣೆಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ
ಸಕಲೇಶಪುರ : ಬೆಂಕಿಯ ಜ್ವಾಲೆಗೆ ತೀವ್ರವಾಗಿ ಸುಟ್ಟು ಗಾಯಗೊಂಡು ನಿಧನರಾದ ಸುಂದರೇಶ್ ಸಾವಿಗೆ ಸಕಲೇಶಪುರ,ಆಲೂರು,ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಲೆನಾಡ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಸಹಜವಾಗಿ ಗುಡ್ಡ,ಕಾಡುಗಳಿಗೆ ಬೆಂಕಿ ಬೀಳುತ್ತಲಿದೆ. ಈ ಸಮಯದಲ್ಲಿ ಬೆಂಕಿ ನಂದಿಸಲು ತೆರಳುವ ಸಿಬ್ಬಂದಿಗಳಿಗೆ ಅತ್ಯಾಧುನಿಕ ಸಲಕರಣೆಗಳನ್ನು ಸರ್ಕಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು.
ಸರ್ಕಾರ ವಿಶೇಷವಾಗಿ ಪಶ್ಚಿಮ ಘಟ್ಟ ಉಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಪಶ್ಚಿಮ ಘಟ್ಟದೊಳಗೆ ಯಾವುದೇ ಕಾಮಗಾರಿಗಳಿಗೆ ಅವಕಾಶ ನೀಡಬಾರದೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೆಂಕಿಯಲ್ಲಿ ಬೆಂದು ಹೋಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಪೊಲೀಸ್ ಇಲಾಖೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಕಾರ್ಯಕ್ಕೆ ಸಿಮೆಂಟ್ ಮಂಜುನಾಥ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.