28ಕ್ಕೆ ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಸಕಲೇಶಪುರಕ್ಕೆ ಡಿ.ಕೆ ಶಿವಕುಮಾರ್: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಸಾಧ್ಯತೆ.
ಸಕಲೇಶಪುರ: ಮುಂಬರುವ ಫೆಬ್ರವರಿ 28ರಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ತಾಲೂಕಿಗೆ ಪ್ರಜಾಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ಆಗಮಿಸುತ್ತಿದ್ದು ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಈಗಾಗಲೇ ಸಿದ್ದತೆಗಳು ತಯಾರಾಗಿದೆ. ಕಾಂಗ್ರೆಸ್ ನಿಂದ ಈಗಾಗಲೇ ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ 5 ಜನ ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು ಇದರಲ್ಲಿ ಒಬ್ಬರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನುಳಿದ ನಾಲ್ಕು ಜನ ಅಕಾಂಕ್ಷಿಗಳಲ್ಲಿ ಇಬ್ಬರ ನಡುವೆ ಪೈಪೋಟಿ ಇದ್ದು ಈ ಎಲ್ಲಾ ಕುತೂಹಲಗಳಿಗೆ ಫೆ.28 ರಂದು ಅಂತ್ಯ ಕಾಣುವ ಸಾಧ್ಯತೆಯಿದ್ದು ಅಂದರೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನು ಡಿ.ಕೆ.ಶಿವಕುಮಾರ್ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿದೆ.