ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಅವ್ಯವಸ್ಥೆ ಖಂಡಿಸಿ ಕೊಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಯಿತು.
ರೊಚ್ಚಿಗೆದ್ದ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಆಕ್ರೋಶ
ಈ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಕೊಲ್ಲಹಳ್ಳಿ ಗ್ರಾಮಸ್ಥರ ಸಲೀಂ ಮಾತನಾಡಿ ಹಾಸನದ ಕಂದಲಿಯಿಂದ ಮಾರನಹಳ್ಳಿ ವರೆಗೆ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಆಮೆ ಗತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು. ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು ಗುಣಮಟ್ಟ ರಹಿತ ಕಾಮಗಾರಿಯಾಗಿದೆ. ಕಂದಲಿಯಿಂದ ಮಾರನಹಳ್ಳಿ ವರೆಗೆ ಬರುವ ಅನೇಕ ಗ್ರಾಮಗಳು ಕಳೆದ ಏಳು ವರ್ಷಗಳಿಂದ ನೆಮ್ಮದಿ ಇಲ್ಲದೆ ಮತ್ತು ಅನಾರೋಗ್ಯದ ಬದುಕನ್ನು ಅನುಭವಿಸುತ್ತಿದ್ದಾರೆ. ಕಾಮಗಾರಿ ನಡೆಯುವ ಮಾರ್ಗ ಮಧ್ಯೆ ವಿಷಕಾರಿ ಅನಿಲ ಮತ್ತು ಧೂಳಿನಿಂದ ಕೂಡಿದ ವಾತಾವರಣವನ್ನು ಗುತ್ತಿಗೆದಾರರು ನಿರ್ಮಾಣ ಮಾಡಿದ್ದು ಇದರಿಂದ ಸಾರ್ವಜನಿಕರು ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇತ್ತೀಚಿಗೆ ಕೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಡಸ್ಟ್ ಅಲರ್ಜಿ ಕೆಮ್ಮು ಶೀತ ಜ್ವರ ಹವ್ಯಾತವಾಗಿ ಕಾಣಿಸತೊಡಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ತ್ವರಿತ್ವವಾಗಿ ಮುಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಬೈರಮುಡಿ ಚಂದ್ರು, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಕೆಪಿಸಿಸಿ ಸದಸ್ಯ ಯಡೇಹಳ್ಳಿ ಮಂಜುನಾಥ್ ,ಬಿಜೆಪಿ ಅಧ್ಯಕ್ಷ ಮಂಜುನಾಥ್ ಸಂಘಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲರಾಜ್, ಸಂದೇಶ್, ಮಳಲಿ ಗ್ರಾ.ಪಂ ಅಧ್ಯಕ್ಷ ಕೊಲ್ಲಹಳ್ಳಿ ಸತೀಶ್ ಕಾಂಗ್ರೆಸ್ ಮುಖಂಡರುಗಳಾದ ಕೃಷ್ಣೇಗೌಡ, ಕಿರಣ್, ಗೊದ್ದು ಲೋಕೇಶ್, ಈಶ್ವರ್ ಆಳ್ವಾ ಮುಂತಾದವರು ಹಾಜರಿದ್ದರು.