Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಅಕ್ರಮ ಮದ್ಯ ಮಾರಾಟ; ಕೌಡಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

ಸಕಲೇಶಪುರ : ಅಕ್ರಮ ಮದ್ಯ ಮಾರಾಟ; ಕೌಡಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

ಸಕಲೇಶಪುರ :  ಗ್ರಾಮದಲ್ಲಿರು ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ  ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೌಡಳ್ಳಿ ಗ್ರಾಮಸ್ಥರು ಉಪವಿಭಾಗ ಕಚೇರಿ ಮುಂಬಾಗ ಪ್ರತಿಭಟನೆ ನಡೆಸಿದರು.
 ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು ಅಕ್ರಮ ಮದ್ಯ ಮಾರಾಟ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬೇಕಾಗಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯ. ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು  ಆರೋಪಿಸಿದರು. ಕುಡಿತದ ಚಟಕ್ಕೆ  ಯುವ ಜನಾಂಗ ಹಾಗೂ ಕೂಲಿ ಕಾರ್ಮಿಕ ಕುಟುಂಬ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಮಾಮೂಲಿ ವಸೂಲಿಯಲ್ಲಿಯೇ ನಿರಂತರವಾಗಿ ಹಳ್ಳಿಗಳ ನೆಮ್ಮದಿ ಹಾಳು ಮಾಡುತ್ತಿದ್ದಾರೆಂದು ಅಕ್ರೋಶ ವ್ಯಕ್ತಪಡಿಸಿದರು.

ನಿರಂತರವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಎಲ್ಲೊ ಕೆಲವು ಕಡೆ  ದಾಳಿ ಮಾಡಿದಂತೆ ಪ್ರಚಾರ ಗಿಟ್ಟಿಸಿಕೊಂಡು ಇತರರಿಗೆ ಎಚ್ಚರಿಕೆ ಕೊಡುವ, ಆ ಮೂಲಕ ವಸೂಲಿ ಬಾಜಿಯಲ್ಲಿ ನಿರತರಾಗಿದ್ದಾರೆ ಎಂದು ಅರೋಪಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ತಿಮ್ಮಯ್ಯ ಗ್ರಾಮಸ್ಥರಾದ ಜಯ, ಜಯಮ್ಮ , ಮಂಜುಳ, ಕಮಲಾಕ್ಷಿ, ಕುಮಾರಸ್ವಾಮಿ, ಮಂಜುನಾಥ್ ಇನ್ನಿತರರು ಇದ್ದರು
RELATED ARTICLES
- Advertisment -spot_img

Most Popular