ಚೀರಿ ಹಾಗೂ ಚಿನ್ನಹಳ್ಳಿ ಗ್ರಾಮದಲ್ಲಿ ರಸ್ತೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಎತ್ತಿನಹೊಳೆ ಕಚೇರಿ ಮುಂದೆ ಬೃಹತ್ ಪ್ರತಿಭಟನೆ.
ಸಕಲೇಶಪುರ: ಚೀರಿ ಚಿನ್ನಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯಡಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಚೀರಿ ಹಾಗೂ ಚಿನ್ನಹಳ್ಳಿ ಗ್ರಾಮಸ್ಥರು ಪಟ್ಟಣದ ಎತ್ತಿನಹೊಳೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸೋಮವಾರ ಚೀರಿ ಹಾಗೂ ಚಿನ್ನಹಳ್ಳಿ ಗ್ರಾಮಗಳಲ್ಲಿ ಹರಿಯುವ ಉಪನದಿಗಳು ಎತ್ತಿನಹೊಳೆಗೆ ಹೋಗುತ್ತಿದ್ದು ಆದರೂ ಸಹ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯಡಿ ಯಾವುದೆ ರಸ್ತೆ ಹಾಗೂ ಸೇತುವೆ ನಿರ್ಮಾಣವಾಗದೆ ಗ್ರಾಮಸ್ಥರು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ. ಶಾಸಕರ ನಿರ್ಲಕ್ಷವೆ ಇದಕ್ಕೆ ಕಾರಣವಾಗಿದ್ದು ಕೂಡಲೆ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಲಾಗಿತ್ತು.ಮಂಗಳವಾರ ಪ್ರತಿಭಟನೆ ಮುಂದುವರೆದ ಭಾಗವಾಗಿ ಎತ್ತಿನಹೊಳೆ ಕಚೇರಿ ಆವರಣದಲ್ಲಿ ಸೇರಿದ ಗ್ರಾಮಸ್ಥರು ಯೋನೆಯ ಎ.ಇ.ಇ ಬಂದು ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣದ ಖಚಿತ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು. ಈ ಸಂಧರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಮುಖಂಡರು ಪ್ರತಿಭಟನೆಗೆ ಸಾಥ್ ನೀಡಿದರು.
ಪ್ರತಿಭಟನೆಯಲ್ಲಿ ಗ್ರಾಮಸ್ಥರುಗಳಾದ ವಳಲಹಳ್ಳಿ ಅಶ್ವಥ್, ಜಾತಹಳ್ಳಿ ಪುಟ್ಟಸ್ವಾಮಿ, ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ,ಗ್ರಾಮಸ್ಥ ಲಕ್ಷ್ಮಣ್ ಮತ್ತಿತರರು ಹಾಜರಿದ್ದರು.