5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ.
ಅನುದಾನರಹಿತ ಶಾಲೆಗಳ ಸಂಘವು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ. ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರ ಬಿದ್ದಿದೆ.
ನ್ಯಾಯಾಲಯದ ಆದೇಶವನ್ನು ತಾಲ್ಲೂಕಿನ ಖಾಸಗಿ ಶಾಲೆ ಅಡಳಿತ ಮಂಡಳಿಗಳು ಸ್ವಾಗತಿಸಿದೆ