Sunday, November 24, 2024
Homeಸುದ್ದಿಗಳುರಾಜ್ಯಕಳೆದ ವಿಧಾನಸಬಾ ಚುನಾವಣೆಯಲ್ಲಿ‌ ಕ್ಷೇತ್ರದಲ್ಲಿ ಬಿಜೆಪಿ ಅಲೆ ಸೃಷ್ಟಿಸಿದ್ದ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆ

ಕಳೆದ ವಿಧಾನಸಬಾ ಚುನಾವಣೆಯಲ್ಲಿ‌ ಕ್ಷೇತ್ರದಲ್ಲಿ ಬಿಜೆಪಿ ಅಲೆ ಸೃಷ್ಟಿಸಿದ್ದ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆ

ಕಳೆದ ವಿಧಾನಸಬಾ ಚುನಾವಣೆಯಲ್ಲಿ‌ ಕ್ಷೇತ್ರದಲ್ಲಿ ಬಿಜೆಪಿ ಅಲೆ ಸೃಷ್ಟಿಸಿದ್ದ ಕದಲೂರು ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಮಿತ್ರ ಸೋಮಶೇಖರ್ ಪರ ಬಿಜೆಪಿ ಅಲೆ ಸೃಷ್ಟಿಸಿದ್ದ ಕದಲೂರು ಉದಯ್ ಗೌಡ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

   ಸಕಲೇಶಪುರದ ಅಳಿಯ ಆಗಿರುವ ಉದಯ್ ಗೌಡ ಕಳೆದ 2 ವರ್ಷಗಳಿಂದ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಸಮಾಜ ಸೇವೆ ಆರಂಭಿಸಿದ್ದರು. ಪಕ್ಷೇತರರಾಗಿ ಗೆಲ್ಲುವುದು ಕಷ್ಟ ಎಂದು ಅರಿತು ಮಂಗಳವಾರ ಸಂಜೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಕದಲೂರು ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿ ಪಕ್ಷದ ಸಿದ್ದಾಂತ ಮೆಚ್ಚಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಒಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯ್ ಅವರನ್ನು ಜಿಲ್ಲೆಯ ಎಲ್ಲಾ ನಾಯಕರ ಸಮ್ಮುಖದಲ್ಲಿ ಇಂದು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. 

ಉದಯ್ ಅವರಿಗೆ ಟಿಕೆಟ್ ನೀಡಲಾಗುವುದೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ‘ನಾವು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಬೇಷರತ್ತಾಗಿ ಬರಬೇಕು. ಪಕ್ಷಕ್ಕೆ ದುಡಿಯಬೇಕು. ನಂತರ ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿರಬೇಕು. ಪಕ್ಷ ಅಗತ್ಯ ಸಮಯದಲ್ಲಿ ಸೂಕ್ತ ತೀರ್ಮಾನ ಮಾಡಲಿದೆ’ ಎಂದು ತಿಳಿಸಿದ್ದೇನೆ ಎಂದರು.

ಉದಯ್ ಅವರು ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದರು ಎಂಬ ಅಪಾದನೆ ಇದೆಯಲ್ಲ ಎಂದು ಕೇಳಿದಾಗ ‘ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದರು. ವಿರೋಧ ಪಕ್ಷದಲ್ಲಿದ್ದಾಗ ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಜತೆ ಇದ್ದ ಎ.ಮಂಜು ಅವರು ಈಗ ಜೆಡಿಎಸ್ ಗೆ ಹೋಗಿದ್ದಾರೆ. ಜೆಡಿಎಸ್ ನಲ್ಲಿದ್ದ ಶಿವಲಿಂಗೇಗೌಡರು, ಗುಬ್ಬಿ ವಾಸು, ಮಧುಬಂಗಾರಪ್ಪ ಸೇರಿದಂತೆ ಅನೇಕರು ಕಾಂಗ್ರೆಸ್ ಗೆ ಬಂದಿದ್ದಾರೆ. ನಾನು ಕುಮಾರಸ್ವಾಮಿ ಅವರು ಪರಸ್ಪರ ಎದುರಾಳಿಯಾಗಿ ಗುದ್ದಾಡಿದ್ದರೂ ಪೈಕಮಾಂಡ್ ನಿರ್ದೇಶನದ ಮೇರೆಗೆ ಅವರ ಜತೆ ಸೇರಿ ಮೈತ್ರಿ ಸರ್ಕಾರ ಮಾಡಿದ್ದೇವೆ. ರಾಜಕಾರಣದಲ್ಲಿ ಇಂತಹ ಬೆಳವಣಿಗೆ ಸಹಜ’ ಎಂದು ತಿಳಿಸಿದರು.

ಪುಟ್ಟಣ್ಣ ಅವರು ಪಕ್ಷ ಸೇರ್ಪಡೆ ಯಾವಾಗ ಎಂದು ಕೇಳಿದಾಗ, ‘ಅವರ ಅರ್ಜಿ ಇನ್ನು ಬಂದಿಲ್ಲ. ಅರ್ಜಿ ಬಂದ ನಂತರ ಎಲ್ಲರಿಗೂ ಮಾಹಿತಿ ನೀಡುತ್ತೇವೆ. ಈ ಕಚೇರಿ ದೇವಾಲಯವಿದ್ದಂತೆ. ಈ ದೇವಾಲಯಕ್ಕೆ ಯಾರು ಬೇಕಾದರೂ ಬರಬಹುದು’ ಎಂದರು.

ಮದ್ದೂರು ವಿಧಾನಸಭೆ ಕ್ಷೇತ್ರದ ಕದಲೂರು ಉದಯ್ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಶಾಸಕ ಕೆ ಬಿ ಚಂದ್ರಶೇಖರ್, ಎಂಎಲ್ಸಿಗಳಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಕಾಂಗ್ರೆಸ್ ಮುಖಂಡ ಗುರುಚರಣ್, ಡಿಸಿಸಿ ಅಧ್ಯಕ್ಷ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular