ಸಕಲೇಶಪುರ : ಮುಂಬರುವ ವಿಧಾನ ಚುನಾವಣಾ ಹಿನ್ನಲೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿಗಳಿಗೆ ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ಸ್ವೀಪ್ ಸಮಿತಿಯಿಂದ 2023 ವಿಧಾನಸಭಾ ಚುನಾವಣೆ ಮತದಾರರ ಜಾಗೃತಿ ಪರಿಶೀಲನ ಸಭೆ ನಡೆಯಿತು .
ಈ ಸಂಧರ್ಭದಲ್ಲಿ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸುಷ್ಮಾ ಮಾತನಾಡಿ, ಚುನಾವಣೆ ನಿಮಿತ್ತ ವಿವಿಧ ಹಂತದ ಎಲ್ಲಾ ಅಧಿಕಾರಿಗಳು ಈಗಾಗಲೆ ತಮಗೆ ನೀಡಿರುವ ಜವಬ್ದಾರಿಯನ್ನು ಲೋಪವಾಗದಂತೆ ಎಚ್ಚರದಿಂದ ನಿರ್ವಹಿಸಬೇಕು. ಅದರಲ್ಲೂ ಬೂತ್ ಮಟ್ಟದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಹೆಚ್ಚಿನ ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು. ಬಹುತೇಕ ಮತದಾರರ ಹೆಸರುಗಳು ಒಂದೇ ಇರುತ್ತವೆ ಅಂಥವರನ್ನು ಗುರುತಿಸಲು ಫೋಟೊ ಮತ್ತು ವಿಳಾಸ ಸ್ಪಷ್ಟವಾಗಿ ಇರಬೇಕು ಇಂಥವುಗಳನ್ನು ಮೊದಲೆ ಗುರುತಿಸಿದ್ದರೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಪ್ರತಿಯೊಬ್ಬ ಮತದಾರ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು, ಹಾಗೆ ನೈತಿಕ ಮತದಾನಕ್ಕೆ ಒತ್ತು ನೀಡಬೇಕು ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ತಾಪಂ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ತಾಪಂ ಸಹಾಯಕ ನಿರ್ದೇಶಕರಾದ ಹರೀಶ್, ಆದಿತ್ಯ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು