Monday, November 25, 2024
Homeಸುದ್ದಿಗಳುಸಕಲೇಶಪುರಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆರುವುದು ಖಚಿತ -ಡಿ. ಕೆ ಸುರೇಶ್

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆರುವುದು ಖಚಿತ -ಡಿ. ಕೆ ಸುರೇಶ್

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆರುವುದು ಖಚಿತ –ಡಿ. ಕೆ ಸುರೇಶ್

ಅಭ್ಯರ್ಥಿ ಮುರಳಿ ಮೋಹನ್ ಪರವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕರೆ

 

ಸಕಲೇಶಪುರ: ಕ್ಷೇತ್ರದಲ್ಲಿ ಕೆಲಸ ಮಾಡದ ಶಾಸಕರನ್ನು ಬದಲಾವಣೆ ಮಾಡಲು ಮತದಾರರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಂದಾಗಬೇಕಾಗಿದೆ ಎಂದು ಸಂಸದ ಹಾಗೂ ಹಾಸನ ಜಿಲ್ಲಾ ಚುನಾವಣೆ ಉಸ್ತುವಾರಿ ಡಿ.ಕೆ ಸುರೇಶ್ ಹೇಳಿದರು. 

     ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ರೈತ ಭವನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ತಯಾರಿ ಕುರಿತು ನಡೆದ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕ್ಷೇತ್ರದ ಆಗುಹೋಗುಗಳ ಕುರಿತು ಮುರುಳಿ ಮೋಹನ್‌ರವರಿಗೆ ಅರಿವು ಹೊಂದಿರುವುದರಿಂದ ಪಕ್ಷ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರ ಅಭಿಲಾಷೆಯಂತೆ ಟಿಕೇಟ್ ನೀಡಿದೆ. ಕಳೆದ 15 ವರ್ಷಗಳ ಹಿಂದೆ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿತ್ತು. ಕ್ಷೇತ್ರ ಮೀಸಲಾತಿಯಾದ ನಂತರ ಅಭಿವೃದ್ದಿ ವಿಚಾರದಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕ್ಷೇತ್ರವನ್ನು ಬದಲಾವಣೆ ಮಾಡಲು ಸಾಧ್ಯವಾಗದಿದ್ದಲ್ಲಿ ಅವರಿಗೆ ಮತ ಹಾಕಿ ಏನು ಪ್ರಯೋಜನ ಎಂಬುದನ್ನು ಎಲ್ಲಾರು ಯೋಚನೆ ಮಾಡಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಸಮರ್ಥವಾದ ವ್ಯಕ್ತಿ ಬೇಕು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದರಿಂದ ಮುರುಳಿ ಮೋಹನ್ ರವರ ಪರ ನೀವೆಲ್ಲಾ ಕೆಲಸ ಮಾಡಬೇಕಾಗಿದೆ ಹಾಗೂ ಜನಸಾಮಾನ್ಯರಿಗೆ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ತಲುಪಿಸಬೇಕಾಗಿದೆ..ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣಾಗಿದ್ದು ಇದರಿಂದ ಎಲ್ಲಾರು ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಆಶಿಸುತ್ತಿದ್ದಾರೆ. ಅಲ್ಲದೆ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು ಉದ್ಯೋಗ ಸೃಷ್ಠಿ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಲವಾಗಿದೆ. ಬಿಜೆಪಿ ಕೇವಲ ಧರ್ಮ ಜಾತಿಗಳ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಇನ್ನು ಜೆಡಿಎಸ್ ಪಕ್ಷ ಕೇವಲ 35 ಸೀಟುಗಳನ್ನು ಗೆಲ್ಲಲು ಯತ್ನಿಸಿ ಅಧಿಕಾರ ಹಿಡಿಯಲು ಮುಂದಾಗುತ್ತಿದೆ. ಜೆಡಿಎಸ್ ಗೆ 124 ಸೀಟುಗಳು ಬೇಕಿಲ್ಲ, ಹೊಳೆನರಸೀಪುರದ ಶಾಸಕರು ಇಲ್ಲಿನ ಶಾಸಕರಾಗಿದ್ದಾರೆ ಇಲ್ಲಿನ ಶಾಸಕರು ನಾಮಕವಸ್ತೆ ಶಾಸಕರಾಗಿದ್ದಾರೆ. ಇಲ್ಲಿ ಜೆಡಿಎಸ್ ಶಾಸಕರನ್ನು ಗೆಲ್ಲಿಸಿದರೆ ಹೊಳೆನರಸೀಪುರಕ್ಕೆ ಲಾಭ ಎಂದರು.. 

 ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್ ಮಾತನಾಡಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ನಾವು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕಾಗಿದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೆ ಸಂಶಯವಿಲ್ಲ, ನೀವೆಲ್ಲರು ಒಗ್ಗೂಡಿ ಪ್ರತಿ ಬೂತ್‌ಗಳಲ್ಲಿ ಶ್ರಮ ಹಾಕಿದರೆ ಮಾತ್ರ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯ ಈ ನಿಟ್ಟಿನಲ್ಲಿ ನಾವೆಲ್ಲಾ ಒಗ್ಗೂಡಿ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸೋಣ ಎಂದರು.

ಕಾರ್ಯಕ್ರಮ ಆರಂಭವಾಗುವ ಮೊದಲು ಇತ್ತೀಚೆಗಷ್ಟೆ ನಿಧನರಾದ ಕಾಂಗ್ರೆಸ್ ಮುಖಂಡ ಧ್ರುವನಾರಾಯಣ್ ರವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

  ಮಾಜಿ ತಾ.ಪಂ ಸದಸ್ಯ ಗೋಪಾಲಸ್ವಾಮಿ, ಎಸ್.ಡಿ.ಪಿ.ಐ ಮಾಜಿ ತಾಲೂಕು ಅಧ್ಗಕ್ಷ ಮೊಹಿಯುದಿನ್, ಸೇರಿದಂತೆ ಇನ್ನು ಹಲವು ಮಂದಿ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾದರು. 

ಈ ಸಂಧರ್ಭದಲ್ಲಿ ಹಾಸನ ವಿಧಾನಸಬಾ ಕ್ಷೇತ್ರದ ಚುನಾವಣಾ ವೀಕ್ಷಕ ಅನಿಲ್, ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೊದ್ದು ಲೋಕೇಶ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಕೆಪಿಸಿಸಿ ಸದಸ್ಯರಾದ ಕೊಲ್ಲಹಳ್ಳಿ ಸಲೀಂ, ಯಡೇಹಳ್ಳಿ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಬ್ಯಾಕರವಳ್ಳಿ ವಿಜಯ್ ಕುಮಾರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ನಾಗರಾಜ್, ಎಸ್.ಸಿ.ಎಸ್.ಟಿ ಘಟಕದ ತಾಲೂಕು ಅಧ್ಯಕ್ಷ ಗಿರೀಶ್, ಯುವ ಮುಖಂಡ ಭುವನಾಕ್ಷ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -spot_img

Most Popular