Tuesday, April 8, 2025
Homeಸುದ್ದಿಗಳುರಾಜ್ಯಮುರಘಾ ಶರಣರ ಮೇಲೆ ಮತ್ತೆ ಇಬ್ಬರು ಅಪ್ರಾಪ್ತ ಬಾಲಕಿಯರಿಂದ ಲೈಂಗಿಕ ಕಿರುಕುಳ ...

ಮುರಘಾ ಶರಣರ ಮೇಲೆ ಮತ್ತೆ ಇಬ್ಬರು ಅಪ್ರಾಪ್ತ ಬಾಲಕಿಯರಿಂದ ಲೈಂಗಿಕ ಕಿರುಕುಳ ದೂರು ದಾಖಲು

ಮೈಸೂರು: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಮತ್ತಿಬ್ಬರು ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ.

 

12 ಹಾಗೂ 14 ವರ್ಷದ ಇಬ್ಬರು ಬಾಲಕಿಯರು ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಪೋಷಕರ ಜತೆ ಮೈಸೂರಿನ ಒಡನಾಡಿ ಸಂಸ್ಥೆಗೆ ಆಗಮಿಸಿರುವ ವಿದ್ಯಾರ್ಥಿಗಳು, ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಿದ್ದಾರೆ. ಮಕ್ಕಳು ಸದ್ಯ ಒಡನಾಡಿ ಆಶ್ರಯದಲ್ಲಿದ್ದಾರೆ. ಮಕ್ಕಳಿಂದ ಹೇಳಿಕೆ ಪಡೆದು ದೂರು ದಾಖಲಿಸಲಾಗಿದೆ.

 

ಮುರುಘಾ ಶರಣರು ಈಗಾಗಲೇ ಪೋಕೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೃದಯ ಸಮಸ್ಯೆ ಹೊಂದಿರುವ ಶ್ರೀಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ನಡೆದಿದೆ. ಜಾಮೀನು ನಿರಾಕರಿಸಲಾಗಿದೆ.

RELATED ARTICLES
- Advertisment -spot_img

Most Popular