Tuesday, April 15, 2025
Homeಸುದ್ದಿಗಳುಸಕಲೇಶಪುರಮಡಬಲು ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ 

ಮಡಬಲು ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ 

ಮಡಬಲು ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ 

ಅಧ್ಯಕ್ಷ – ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಸಿಮೆಂಟ್ ಮಂಜು 

ಆಲೂರು : ತಾಲೂಕಿನ ಮಡಬಲು ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ವನಿತಾ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಪುಷ್ಪವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಪಂ 18 ಜನ ಸದಸ್ಯರಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಶಾಸಕ ಸಿಮೆಂಟ್ ಮಂಜು ಗ್ರಾಪಂ ತೆರಳಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು,ಭ್ರಷ್ಟಾಚಾರ ರಹಿತವಾಗಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಕೆಲಸವನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮಾಡುತ್ತಾರೆ. ಮುಂದಿನ ದಿನಗಳಲ್ಲಿ ಜನಪರ ಆಡಳಿತ ನೀಡಲು ಬದ್ದವಾಗಿದ್ದೇವೆ ಎಂದರು.

RELATED ARTICLES
- Advertisment -spot_img

Most Popular