ಆಲೂರು : ನಿಂತಿದ್ದ ಲಾರಿಗೆ ಕಾರು ಒಂದು ಹಿಂಬದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ತಾಲೂಕಿನ ಪಾಳ್ಯ ಬಳಿ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟಿಂಬರ್ ಲಾರಿಗೆ ಹಾಸನದ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು ಪ್ರದೀಪ್ (30) ಮತ್ತು ಗುರು (25) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಇನ್ನಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಶ್ವರಹಳ್ಳಿ ಕೂಡಿಗೆ ಸಮೀಪ ನೂತನ ಹೋಟೆಲ್ ಒಂದರ ಪೂಜೆಗೆಂದು ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಯನ್ನು ತೋರಿಸುತ್ತಿದೆ. ಸ್ಥಳಕ್ಕೆಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.