ಸಕಲೇಶಪುರ/ಆಲೂರು : ಪಾಳ್ಯ ಗ್ರಾಮದಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ ಎಚ್.ಕೆ ಕುಮಾರಸ್ವಾಮಿ.
ಸಕಲೇಶಪುರ :- ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ’ ಎಂದು ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ಇವರ ಪಾಳ್ಯ ಗ್ರಾಮದಲ್ಲಿ 50 ಲಕ್ಷ ರೂಪಾಯಿ ವೆಚ್ಚದ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು. ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರ ತೋರಿದ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ’ ಎಂದರು
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್, ತಹಸೀಲ್ದಾರ್ ಪೂರ್ಣಿಮಾ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಂಚಲ ಕುಮಾರಸ್ವಾಮಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಮುಂತಾದವರಿದ್ದರು.