ಶಾಸಕ ಸಿಮೆಂಟ್ ಮಂಜು ಸೂಚನೆಯಂತೆ ಕ್ರಾಫರ್ಡ್ ಆಸ್ಪತ್ರೆಯ ಪೊಲೀಸ್ ಚೌಕಿಗೆ ಸಿಬ್ಬಂದಿಗಳ ನೇಮಕ.
ಸಕಲೇಶಪುರ : ಸಾರ್ವಜನಿಕರ ಹಿತ ದೃಷ್ಟಿಯಿಂದ ಕ್ರಾಫರ್ಡ್ ಆಸ್ಪತ್ರೆ ಮುಂಭಾಗ ಪೊಲೀಸ್ ಚೌಕಿಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ನಡೆದ ರಕ್ಷಾ ಸಮಿತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ತುರ್ತಾಗಿ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು.ಈ ವೇಳೆ ಮಾತನಾಡಿದ ಶಾಸಕ ಸಿಮೆಂಟ್ ಮಂಜು,ಅಪಘಾತ, ಹೊಡೆದಾಟ ಮುಂತಾದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆ ಪ್ರಾಂಗಣದ ಒಳಗೆ ನಡೆಯಬಹುದಾದ ಕಾನೂನುಬಾಹಿರ ಚಟುವಟಿಕೆ ತಡೆಯಲು ಪೋಲೀಸ್ ಚೌಕಿ ನೆರವಾಗಲಿದೆ. ಕೆಲವೊಮ್ಮೆ ಆಸ್ಪತ್ರೆ ಮುಂಭಾಗ ಜನದಟ್ಟಣೆ ಹೆಚ್ಚಾಗಿ, ರೋಗಿಗಳಿಗೆ ಉಂಟಾಗುವ ತೊಂದರೆ ತಪ್ಪಿಸಲು ಪೊಲೀಸರ ನಿಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.ಆಸ್ಪತ್ರೆ ಪ್ರಾಂಗಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸುವುದರಿಂದ ಕಾನೂನುಬಾಹಿರ ಚಟುವಟಿಕೆಗೆ ಕಡಿವಾಣ ಹಾಕಲು ಸಾಧ್ಯ. ಶುಚಿತ್ವ, ಸಿಬ್ಬಂದಿ ಸುರಕ್ಷತೆ, ತುರ್ತು ಸಂದರ್ಭಗಳ ನಿರ್ವಹಣೆಗೆ ರಕ್ಷಣೆ ತುಂಬಾ ಅಗತ್ಯವಾಗಿದ್ದು, ಪೊಲೀಸ್ ಸಿಬ್ಬಂದಿಯ ನಿಯೋಜನೆಯಿಂದ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ’ ಎಂದು ತಿಳಿಸಿದರು. ಕ್ರಾಫರ್ಡ್ ಆಸ್ಪತ್ರೆಯಲ್ಲಿನ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಇನ್ನು ಕೆಲವೇ ದಿನಗಳಲ್ಲಿ ಮಾರ್ಷಲ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.