ಸಕಲೇಶಪುರ :- ತಾಲ್ಲೂಕಿನಲ್ಲಿ ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು ಇದರ ಶ್ರೇಯೋಬಿವೃದ್ದಿಗಾಗಿ ಹಿಂದುಳಿದ ವರ್ಗಗಳ ಒಕ್ಕೂಟ ಸಕಲೇಶಪುರ ಘಟಕದ ನೂತನ ಪದಾಧಿಕಾರಿಗಳ ಪದ ಗ್ರಹಣ ಕಾರ್ಯಕ್ರಮ ದಿನಾಂಕ 27/12/22 ರ ಮಂಗಳವಾರ ಸಂಜೆ 5 ಗಂಟೆಗೆ ನಗರದ ಸಕಲೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಪಟೇಲ್ ಪ್ಲಾಜಾ ದಲ್ಲಿ ನಡೆಯಲಿದೆ ಎಂದು ಸಂಘಟನೆಯ ನೂತನ ಅಧ್ಯಕ್ಷ ಲೋಕೇಶ್ ಎಸ್.ಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದ ವರ್ಗಗಳ ಈ ಕಾರ್ಯಕ್ರಮಕ್ಕೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ಪುಟ್ಟಸ್ವಾಮಿ ಶೆಟ್ಟಿ ರವರು ಹಾಗೂ ಜಿಲ್ಲಾ ಪದಾಧಿಕಾರಿಗಳು ,ತಾಲ್ಲೂಕಿನ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದ ಅಧ್ಯಕ್ಷರು ಪದಾಧಿಕಾರಿಗಳು, ವಿವಿಧ ಪಕ್ಷದ ಜನ ಪ್ರತಿನಿಧಿಗಳು, ರಾಜಕೀಯ ಮುಖಂಡರು ಆಗಮಿಸುವರು, ತಾಲ್ಲೂಕಿನಲ್ಲಿ ಇರುವ ಹಿಂದುಳಿದ ವರ್ಗಗದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ ತೀರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸಂಘವನ್ನು ಸ್ಥಾಪಿಸಿದ್ದು ಸದಸ್ಯತ್ವವನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಡೆದು ಸಂಘಟನೆಯನ್ನು ಬಲ ಪಡಿಸಬೇಕು ಆ ದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ ಹಿಂದುಳಿದ ವರ್ಗಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ತಾ ಉಪಾಧ್ಯಕ್ಷರಾದ ಶ್ರೀನಿವಾಸ್ , ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜನ್ನಾಪುರ, ಸಹ ಕಾರ್ಯದರ್ಶಿ ಸಿ ಆನಂದ್ ಉಪಸ್ಥಿತರಿದ್ದರು.