ಬಾಳ್ಳುಪೇಟೆ ಗ್ರಾಮ ಪಂಚಾಯತಿಯ ಸಾಮಾಜಿಕ ಪರಿಶೋಧನಾ ಸಭೆ ಆಗಸ್ಟ್ 29 ಮುಂದೂಡಿಕೆ.
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯನ್ನು ಇದೆ ತಿಂಗಳು ಆಗಸ್ಟ್ 29 ಗುರುವಾರಕ್ಕೆ ಮುಂದೂಡಲಾಗಿದೆ.
ukip
ಇಂದು ಕರೆದಿದ್ದ ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು ಆಗಮಿಸದೆ ಇರುವುದರಿಂದ ಲೆಕ್ಕ ಪರಿಶೋದನೆ ನಡೆಸುವುದು ಪ್ರಯೋಜನವಿಲ್ಲ ಸಾರ್ವಜನಿಕರು ಸಭೆಯಲ್ಲಿ ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಸಭೆಯ ದಿನಾಂಕವನ್ನು ಮುಂದೂಡುತ್ತಿರುವುದಾಗಿ ಘೋಷಿಸಿದರು.
ನಿಗದಿತ ಸಮಯಕ್ಕಿಂತ 20 ನಿಮಿಷ ತಡವಾಗಿ ಪ್ರಾರಂಭವಾದ ಇಂದಿನ ಸಭೆಯೂ ಸಾಮಾಜಿಕ ಪರಿಶೋಧನೆ ಕುರಿತು ವರದಿ ಮಂಡನೆ ವೇಳೆ ಕೆಲವೊಂದು ಕಾಮಗಾರಿಗಳ ಕುರಿತು ಸಭೆಯಲ್ಲಿದ್ದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು. ಉದ್ಯೋಗ ಖಾತ್ರಿ ಯೋಜನೆ ಅಡಿ ನಡೆದಿರುವ ಕೆಲವು ಕಾಮಗಾರಿಯ ಗೊಂದಲದ ಬಗ್ಗೆ ಗ್ರಾಮ ಪಂಚಾಯತಿ ಸದಸ್ಯರು ಸಭೆಯಲ್ಲಿದ್ದ ಗ್ರಾಮಸ್ಥರಿಗೆ ಎಷ್ಟೇ ಮನವರಿಕೆ ಮಾಡಿದರು ಗ್ರಾಮಸ್ಥರು ಮಾತ್ರ ಒಪ್ಪಿಕೊಳ್ಳಲಿಲ್ಲ ಸೂಕ್ತ ತನಿಖೆ ನೆಡೆಯಬೇಕು ಎಂದು ಒತ್ತಾಯಿಸಿದರು. ಇದೆ ವೇಳೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರು ಸಭೆಯಲ್ಲಿ ಹಾಜರಿರದ ಹಿನ್ನೆಲೆಯಲ್ಲಿ ಸಭೆ ನಡೆಸಿ ಯಾವುದೇ ಪ್ರಯೋಜನವಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಕೆಲ ಗ್ರಾಮ ಪಂಚಾಯತ್ ಸದಸ್ಯರ ನಡುವೆ ವಾಗ್ವಾದ ಉಂಟಾಯಿತು. ಅಂತಿಮವಾಗಿ ಸಾಮಾಜಿಕ ಪರಿಶೋಧನಾ ಸಭೆಯನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಯಿತು.
ಈ ಸಂದರ್ಭದಲ್ಲಿ ಇಂದಿನ ಸಭೆಯ ಅಧ್ಯಕ್ಷತೆಯನ್ನು ಉದ್ಯೋಗ ಖಾತ್ರಿ ಯೋಜನೆಯ ಸದಸ್ಯರಾದ ಅಂಬೇಡ್ಕರ್ ನಗರ ಚಂದ್ರಣ್ಣ, ಉಪಾಧ್ಯಕ್ಷ ಎಚ್. ಎಂ ಸ್ವಾಮಿ, ಗ್ರಾಮ ಪಂಚಾಯತಿಯ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮೇಗೌಡ, ಕಾರ್ಯದರ್ಶಿ ಶೇಖರ್ ಸೇರಿದಂತೆ ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.