ಬಾಳ್ಳುಪೇಟೆ ದೇವಿರಮ್ಮ ನವರ ದೇವಸ್ಥಾನದ ಬೀಗ ಮುರಿದು ಕಳವು
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದೇವಿರಮ್ಮನವರ ದೇವಸ್ಥಾನದಲ್ಲಿ ಕಳ್ಳರು ಬೀಗ ಹೊಡೆದು ದೇವರ ಮುಖವಾಡ ಸೇರಿದಂತೆ ಹಲವು ವಸ್ತುಗಳನ್ನು ಕಳುವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದೇವಿರಮ್ಮನವರ ದೇವಸ್ಥಾನದ ಮುಂಭಾಗ ಇರುವ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲೂ ಕೂಡ ಈ ಹಿಂದೆ ಎರಡು ಮೂರು ಬಾರಿ ದೇವಸ್ಥಾನದ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದರು.. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೇವಸ್ಥಾನ ಇದ್ದರು ಈ ರೀತಿಯ ಕಳ್ಳತನ ಪ್ರಕರಣ ನಡೆದಿರುವುದು ಗ್ರಾಮಸ್ಥರಲ್ಲಿ ಆಶ್ಚರ್ಯ ತಂದಿದೆ. ದೇವಸ್ಥಾನದ ಬೀಗ ಮುರಿದು ಕಳವು ನಡೆಸಿರುವ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಗ್ರಾಮಸ್ಥರು ಒತ್ತಾಯಿಸಿದ್ದಾರೆ