ಬಾಳ್ಳುಪೇಟೆ ಗ್ರಾಮ ದೇವತೆ ದೇವಸ್ಥಾನದಲ್ಲಿ ಕಳವು ಪ್ರಕರಣ : ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ :
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ದೇವಿರಮ್ಮ ನವರ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಬುಧವಾರ ಶಾಸಕ ಸಿಮೆಂಟ್ ಮಂಜುನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.
ಕಳ್ಳರು ದೇವಸ್ಥಾನದ ತಿಜೋರಿಯಲ್ಲಿದ್ದ ದೇವರ ಮುಖವಾಡ, ಬೆಳ್ಳಿ ವಸ್ತುಗಳು ಸೇರಿ ಇನ್ನಿತರ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು. ವಿಷಯ ತಿಳಿಯುತ್ತಿದಂತೆ ದೇವಸ್ಥಾನಕ್ಕೆ ಆಗಮಿಸಿದ ಶಾಸಕರು, ಪಿಎಸ್ಐ ಸದಾಶಿವ ತಿಪ್ಪಾರೆಡ್ಡಿ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡು ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಶಾಸಕರು ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ತಿಳಿಸಿದರು.