ನವದೆಹಲಿ: ಬಿಸಿಸಿಐ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ, 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.
ಬಿಸಿಸಿಐ( ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ)ಯ 36ನೇ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ರೋಜರ್ ಬಿನ್ನಿ ಹೆಸರು ಘೋಷಿಸಲಾಗಿದೆ.
ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್ ಗಂಗೂಲಿ ಅವರಿಂದ ತೆರವಾದ ಸ್ಥಾನಕ್ಕೆ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ. 67 ವರ್ಷದ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಏಕೈಕ ಅಭ್ಯರ್ಥಿಯಾಗಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.