ಸಕಲೇಶಪುರ: ಇದೇ ತಿಂಗಳ ೧೩ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಕಲೇಶಪುರದಲ್ಲಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಬೇಕಾಗಿದ್ದು ಈ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು. ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಸಹ ನಿರ್ಮಾಣ ಮಾಡಲಾಗಿತ್ತು. ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುಜರಾತ್ ನ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮ ಜಿ2೦ಕಾರ್ಯಕ್ರಮಕ್ಕೆ ತೆರಳುವ ಸಾಧ್ಯತೆಯಿರುವುದರಿಂದ ಕೆಲವೆ ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.