Friday, April 4, 2025
Homeಸುದ್ದಿಗಳುದೇಶಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ

ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ

ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ

ನವದೆಹಲಿ: ಗುಜರಾತ್‌ನಲ್ಲಿ(Gujarat Elections) ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯಲಿದೆ ಎಂದು ಟೈಮ್ಸ್‌ ನೌ(Times Now) ವಾಹಿನಿ ತಿಳಿಸಿದೆ. ಆದರೆ ಆಪ್‌(AAP) ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದೆ.

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ(BJP) 125- 130 ಸ್ಥಾನವನ್ನು ಗೆಲ್ಲುವ ಮೂಲಕ ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 29-33, ಆಪ್‌ 20-24, ಇತರರು 1-3 ಸ್ಥಾನಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ

 

ಹಾಲಿ ವಿಧಾನಸಭೆ ಅವಧಿ ಮುಂದಿನ ವರ್ಷದ ಫೆಬ್ರವರಿ 18ಕ್ಕೆ ಮುಗಿಯಲಿದೆ. ಕಳೆದ ಚುನಾವಣೆಯಲ್ಲಿ ಎನ್‍ಡಿಎ 99, ಕಾಂಗ್ರೆಸ್ 77 ಸ್ಥಾನ ಗೆದ್ದಿತ್ತು. ನಂತರ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಬಲ 111ಕ್ಕೆ ಹೆಚ್ಚಾಗಿತ್ತು

ಪ್ರಧಾನಿ ನರೇಂದ್ರ ಮೋದಿ(Narendra Modi) ತವರು ರಾಜ್ಯ ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಡೆಯಲಿದೆ. ಈ ಮೊದಲೇ ನಿರ್ಧಾರವಾದಂತೆಯೇ ಹಿಮಾಚಲ ಮತ್ತು ಗುಜರಾತ್ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದೇ ಪ್ರಕಟವಾಗಲಿದೆ. ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 93 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ

RELATED ARTICLES
- Advertisment -spot_img

Most Popular