ಸಕಲೇಶಪುರ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಮಾಡಿರುವ ಸಾಧನೆಗಳ ಆಧಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಮತ್ತೊಮ್ಮೆ ಬಿಜೆಪಿಗೆ ಮತ ಚಲಾಯಿಸುವುದರಲ್ಲಿ ಅನುಮಾನವಿಲ್ಲ ಎಂದು ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಹೇಳಿದರು.
ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೂತ್ ವಿಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ ರಾಜ್ಯ ಬಿಜೆಪಿ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ, 11000 ಪೌರ ಕಾರ್ಮಿಕರ ಖಾಯಂ,ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಾತಿ ಹೆಚ್ಚಳ,ನಮ್ಮ ಕ್ಲಿನಿಕ್,ವೃದ್ದಾಪ್ಯ ಮಾಸಾಸನ ಹೆಚ್ಚಳ, ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಹಲವು ಜನಪರ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದೆ.ಹಾಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಯಡಿಯೂರಪ್ಪ ,ಬಿ.ಎಲ್.ಸಂತೋಷ್ ನಾಯಕತ್ವವನ್ನು ಬೆಂಬಲಿಸಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮತದಾರರನ್ನು ಮನವೊಲಿಸಲಾಗುವುದು ಎಂದರು.
ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸಕಲೇಶಪುರ ನಗರದಲ್ಲಿ ಕರಪತ್ರವನ್ನು ಹಂಚಲಾಯಿತು ಮತ್ತು ಸ್ಟಿಕರ್ ಗಳನ್ನು ಗೋಡೆಗಳಿಗೆ ಅಂಟಿಸಿ ಬಿಜೆಪಿ ಸದಸ್ಯತ್ವವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಜಿತು ಶುಕ್ರವಾರಸಂತೆ ,ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಅನೂಪ್ ರಾಜ್ ,ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಜಂಬರಡಿ ಲೋಹಿತ್ ,ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ಸಾಗರ್ ,ಯುವಮೋರ್ಚಾ ಪದಾದಿಕಾರಿಗಳಾದ ಪುನೀತ್,ರವಿ,ಸಚಿನ್,ಪ್ರದೀಪ್,ಮಂಜು ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಇದ್ದರು