ಅರಣ್ಯ ಗಸ್ತು ಪಾಲಕ ದಿ.ಸುಂದರೇಶ್ ಹಾಗೂ ಗಾಯಗೊಂಡಿದ್ದ ಮಂಜುನಾಥ್ ಗೆ ಮುಖ್ಯಮಂತ್ರಿಗಳ ಪದಕ ವಿತರಣೆ.
ಬೆಂಗಳೂರು : ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ 25 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರತಿವರ್ಷ ಗುರುತಿಸಿ 2017ರಿಂದ ಮುಖ್ಯಮಂತ್ರಿಗಳ ಪದಕ ನೀಡಲಾಗುತ್ತಿದ್ದು,
ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿ ಕಾಡ್ಲಿಚ್ಚಿಗೆ ಫೆ.16ರ ಮಧ್ಯಾಹ್ನ ತೀರ್ಥಹಳ್ಳಿ ಮೂಲದ ಅರಣ್ಯ ರಕ್ಷಕ ಸುಂದರೇಶ್(41) ಬಲಿಯಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಸುಂದರೇಶ್ ಅವರನ್ನು ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ತೀರ್ಥಹಳ್ಳಿ ತಾಲೂಕಿನ ಟೆಂಕಬೈಲು ಸಮೀಪದ ಸಂಪಿಗೆಸರ ಗ್ರಾಮದ ಸುಂದರೇಶ್, ಗಸ್ತು ಅರಣ್ಯ ಪಾಲಕ ಹುದ್ದೆಗೆ ಬಡ್ತಿ ಪಡೆದು ಕಳೆದ 10 ವರ್ಷಗಳಿಂದ ಹಾಸನ ಅರಣ್ಯ ವೃತ್ತದ ಸಕಲೇಶಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಅದೇ ರೀತಿ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಉಪ ವಲಯ ಅರಣ್ಯಧಿಕಾರಿ -ಕಂ -ಮೋಜಣಿದಾರ ಮಂಜುನಾಥ್ ರವರನ್ನು ಮುಖ್ಯಮಂತ್ರಿಗಳ ಪದಕಕ್ಕೆ ಅರ್ಹರೆಂದು ಪರಿಗಣಿಸಿ ಪ್ರಸ್ತಾವನೆಯನ್ನು ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.ಬೆಂಗಳೂರಿನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ದಿ. ಸುಂದರೇಶ್ ಪತ್ನಿ ಅಕ್ಷತಾ ಹಾಗೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಪತ್ನಿ ನಯನ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಈಶ್ವರ್ ಖಂಡ್ರೆ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪದಕ ವಿತರಣೆ ಮಾಡಲಾಯಿತು.