Saturday, April 12, 2025
Homeಸುದ್ದಿಗಳುರಾಜ್ಯಬೆಂಗಳೂರು : ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ 15 ಲಕ್ಷ ಪರಿಹಾರ; ಸರಕಾರದ ಮಹತ್ವದ...

ಬೆಂಗಳೂರು : ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ 15 ಲಕ್ಷ ಪರಿಹಾರ; ಸರಕಾರದ ಮಹತ್ವದ ತೀರ್ಮಾನ

ಬೆಂಗಳೂರು: ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 7.5 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹಾಸನ ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾನವ ಜೀವ ಹಾನಿಗೆ 15 ಲಕ್ಷ ರೂ. ಪರಿಹಾರ, ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರವನ್ನು 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ, ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತವನ್ನು 30 ಸಾವಿರದಿಂದ 60 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.
ಆಸ್ತಿ ಹಾನಿಗೆ ಪರಿಹಾರ ಮೊತ್ತ 10 ಸಾವಿರ ರೂ.ಗಳಿಂದ 20 ಸಾವಿರ ರೂ. ಹೆಚ್ಚಳ ಹಾಗೂ ಜೀವ ಹಾನಿ, ಶಾಶ್ವತ ಅಂಗವಿಕಲತೆ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನ ಮೊತ್ತ ಮಾಸಿಕ 2,000 ರೂ.ಗಳಿಂದ 4,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ.
RELATED ARTICLES
- Advertisment -spot_img

Most Popular